;

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ!!!

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ!!!

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ದಾಳಿ ನಡೆದಿದೆ.

ರಾಜಕೀಯದ ಹೊರತಾಗಿ ಜಮೀರ್ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ಹಲವು ಉದ್ಯಮದಲ್ಲಿ ತೊಡಗಿದ್ದರು. ಜಮೀರ್ ಅವರ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಜಮೀರ್ ಅವರ ನ್ಯಾಷನಲ್ ಟ್ರಾವೆಲ್ಸ್ ಕಚೇರಿಯ ಮೇಲೆಯೂ ದಾಳಿ ನಡೆಸಲಾಗಿದೆ.
ದಾಳಿಯ ಬಳಿಕ ಎರಡೂವರೆ ಗಂಟೆಗಳವರೆಗೆ ನಿರಂತರವಾಗಿ ಶೋಧ ನಡೆಸಿದ್ದು, ಮನೆ ಮತ್ತು ಫ್ಲ್ಯಾಟ್ , ಕಚೇರಿಗಳಲ್ಲಿ ದೊರಕಿರುವ ಹಣ ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ…

ವರದಿ. ಪ್ರತಾಪ್, ಸಿ,

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;