ಮೊಳಕಾಲ್ಮುರು: ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಕೆಪಿಟಿಸಿ ನೌಕರರಿಂದ ಪ್ರತಿಭಟನೆ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದಲ್ಲಿ ಬೆಸ್ಕಾಂ ಕಚೇರಿಯ ಆವರಣದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಕೆಪಿಟಿಸಿ ನೌಕರರಿಂದ ಪ್ರತಿಭಟನೆ. ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುವಂತಹ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡುವುದು ಬೇಡ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿ ಯಂತರರು ಜಿ.ಶಿವಪ್ರಸಾದ್ ತಿಳಿಸಿದರು. ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. 2021ರ ವಿದ್ಯುತ್ ಕಾಯ್ದೆ ತಿದ್ದುಪಡಿ ಬೇಡ,ಶಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕು. ಕಂಟೆಂಟ್ ಮತ್ತು ಕ್ಯಾರೇಜ್ ಪದ್ದತಿ ಕಾರ್ಮಿಕರಿಗೆ ಮತ್ತು ಗ್ರಾಹಕರಿಗೆ ಹಾನಿಕಾರಕ, ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು, ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡ ಬೇಕು, ಕಾರ್ಮಿಕರಿಗೆ ಕನಿಷ್ಠ ವೇತನ ನೀಡಬೇಕು, ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣ ಮತ್ತು ಹೊರಗುತ್ತಿಗೆಯನ್ನು ಕೂಡಲೇ ಕೈ ಬಿಡಬೇಕು ಎಂಬ ಹಕ್ಕೊತ್ತಾಯ ಗಳನ್ನಿಟ್ಟು ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಚೇರಿಯ ಹಿರಿಯ ಸಹಾಯಕ ಕೃಷ್ಣಪ್ಪ, ಸಹಾಯಕ ಅಭಿಯಂತರ ಚಂದ್ರಕಾಂತರೆಡ್ಡಿ, ಯೂನಿಯನ್ ಅಧ್ಯಕ್ಷ ಸುರೇಶ, ಕಾರ್ಯದರ್ಶಿ ಮೊಹಮ್ಮದ್ ರಫಿ, ನೌಕರರಾದ ರಾಜಗೋಪಾಲ, ತೌಸಿಫ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend