ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ ಕಾಲೇಜು ಆರಂಭಕ್ಕೆ ತೀರ್ಮಾನ | ಸಿಎಂ ಹೇಳಿದ್ದೇನು?
ಬೆಂಗಳೂರು: ರಾಜ್ಯದಲ್ಲಿ 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23ರಿಂದ ಪ್ರಾರಂಭಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಹಿರಿಯರು ಹಾಗೂ ತಜ್ಞರೊಂದಿಗಿನ ಸಭೆಯಲ್ಲಿ ಸಿಎಂ ಶಾಲಾ ಆರಂಭದ ಕುರಿತು ಚರ್ಚಿಸಿದರು.
ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ಹಾಗೂ ರಾಜ್ಯದ ಕೋವಿಡ್ ಸ್ಥಿತಿಗತಿಯನ್ನು ಆಧರಿಸಿ, ಪ್ರಾಥಮಿಕ ಶಾಲೆ ಮತ್ತು 8ನೇ ತರಗತಿ ಪ್ರಾರಂಭಿಸುವ ಬಗ್ಗೆ ಆಗಸ್ಟ್ ತಿಂಗಳ ಅಂತ್ಯದಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು ಎಂದು ವರದಿಯಾಗಿದೆ.
ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಿದ್ದು, ಶಾಲೆ ಕಾಲೇಜುಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಭೆಯ ಬಳಿಕ ಮಾಧ್ಯಮಗಳಿಗೆ ಸಿಎಂ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಂದೆಡೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ, ಲಾಕ್ ಡೌನ್ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗುತ್ತಿದೆ. ಇನ್ನೊಂದೆಡೆ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆಯಾಗುತ್ತಿದೆ. ಸದ್ಯ ಇದು ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಸಿದೆ..

ವರದಿ. ಮುಕ್ಕಣ್ಣ ಹುಲಿಗುಡ್ಡ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
