;

ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆ ತುಂಬಾ ವಿಶಿಷ್ಟವಾದುದು…!!!

ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆ ತುಂಬಾ ವಿಶಿಷ್ಟವಾದುದು
.
ಸ್ವತಂತ್ರ ಭಾರತದಲ್ಲಿರುವಂತಹ ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆ ಬೇರೆ ಯಾವ ದೇಶದಲ್ಲೂ ಇಲ್ಲ. ನಮ್ಮ ದೇಶದಲ್ಲಿ ಅತ್ಯುತ್ತಮವಾದ ಜೀವನ ನಡೆಸುವ ಅವಕಾಶವಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ಪಟ್ಟಣದ ಕೊಟ್ರೆನಂಜಪ್ಪ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಆಯೋಜಿಸಿದ್ದ ೭೫ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸ್ವತಂತ್ರ ಭಾರತದಲ್ಲಿರುವಂತಹ ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆ ಬೇರೆ ಯಾವ ದೇಶದಲ್ಲೂ ಇಲ್ಲ. ನಮ್ಮ ದೇಶದಲ್ಲಿ ಅತ್ಯುತ್ತಮವಾದ ಜೀವನ ನಡೆಸುವ ಅವಕಾಶವಿದೆ. ಒಬ್ಬ ಟೀ ಮಾರಾಟ ಮಾಡುತ್ತಿದ್ದ ಬಾಲಕ ಇವತ್ತು ಈ ದೇಶದ ಪ್ರಧಾನಿಯಾಗಿ ಉತ್ತಮ ಆಡಳಿತ ನಡೆಸುತ್ತಿರುವುದು ಅದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಮೂರು ವರ್ಷಗಳಲ್ಲಿ ಎರಡು ಸಾವಿರ ಕೋಟಿ ರೂ. ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ಖರ್ಚು ಮಾಡಲಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಹೊಳಲ್ಕೆರೆ ತಾಲೂಕನ್ನು ಮಾದರಿ ಕ್ಷೇತ್ರವನ್ನಾಗಿಸುವುದಾಗಿ ಅವರು ಹೇಳಿದರು. ೨೭೬ ಕೋಟಿ ರೂ. ವೆಚ್ಚದಲ್ಲಿ ವಾಣಿವಿಲಾಸ ಡ್ಯಾಂ ಮೂಲಕ ಗ್ರಾಮೀಣ ಪ್ರದೇಶದ ಮನೆ ಮನೆಗಳಿಗೆ ನೀರು ಒದಗಿಸಲಾಗುವುದು, ೮೦೦ ಕೋಟಿ ರೂ. ವೆಚ್ಚದಲ್ಲಿ ೯೪ ಕೆರೆಗಳಿಗೆ ನೀರು ತುಂಬಿಸುವುದು, ರಸ್ತೆ ಹಾಗೂ ಕೆರೆಗಳನ್ನು ಆಧುನಿಕರಣ ಮಾಡುವುದು, ತಾಲೂಕಿನಲ್ಲಿ ವಿದ್ಯುತ್ ಅಭಾವವನ್ನು ಮನಗಂಡು ಹೊಳಲ್ಕೆರೆಯಲ್ಲಿ ೨೨೦ ಕೆವಿ, ಭರಮಸಾಗರದಲ್ಲಿ ೨೨೦ ಕೆವಿ ವಿದ್ಯುತ್ ಘಟಕಗಳನ್ನು ಸ್ಥಾಪಿಸುವುದು, ಮುಂದಿನ ಒಂದು ತಿಂಗಳ ಒಳಗೆ ಶಿವಮೊಗ್ಗ-ಚಿತ್ರದುರ್ಗ ರಸ್ತೆಯನ್ನು ೬ ಪಥದ ರಸ್ತೆಯನ್ನಾಗಿ ನಿರ್ಮಿಸುವುದು, ೧೮ ಕೋಟಿ ರೂ. ವೆಚ್ಚದಲ್ಲಿ ತಹಶೀಲ್ದಾರ್ ಕಚೇರಿ ನಿರ್ಮಾಣ, ೬ ಕೋಟಿ ರೂ. ವೆಚ್ಚದಲ್ಲಿ ಗಣಪತಿ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿಸುವುದಾಗಿ ತಿಳಿಸಿದರು.
ತಹಶೀಲ್ದಾರ್ ಎಂ. ರಮೇಶಾಚಾರಿ ಮಾತನಾಡಿ, ಸ್ರಾತಂತ್ರ ಬಂದ ರೀತಿಯನ್ನು ಈಗಿನ ಜನರು ಮರೆಯುತ್ತಿದ್ದಾರೆ. ಸ್ವಯಂಪ್ರೇರಿತರಾಗಿ ಆಚರಿಸಬೇಕಾದ ಸ್ವಾತಂತ್ರ್ಯೋತ್ಸವವನ್ನು ಒತ್ತಾಯ ಪೂರ್ವಕವಾಗಿ ನಡೆಸುತ್ತಿರುವುದು ಬೇಸರದ ಸಂಗತಿ. ಆರ್ಥಿಕ, ಸಾಮಾಜಿಕ ಸಮಾನತೆ ಸಾಧಿಸುವುದು ಇಂದಿಗೂ ಸಾಧ್ಯವಾಗಿಲ್ಲ. ಭಾರತವನ್ನು ಸುಸ್ಥಿಯಲ್ಲಿಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್ ಮಾತನಾಡಿದರು. ಬಿಇಒ ಸಿ.ಎಂ. ತಿಪ್ಪೇಸ್ವಾಮಿ ಸ್ವಾಗತಿಸಿದರು. ಪುರಸಭೆ ಅಧ್ಯಕ್ಷ ಆರ್.ಎ. ಅಶೋಕ್, ಉಪಾಧ್ಯಕ್ಷ ಕೆ.ಸಿ. ರಮೇಶ್, ಮುಖ್ಯಾಧಿಕಾರಿ ವಾಸಿಂ, ತಾಪಂ ಇಒ ಗಂಗಣ್ಣ, ವೃತ್ತ ನಿರೀಕ್ಷಕ ರವೀಶ್, ಬಿಜೆಪಿ ತಾಲೂಕು ಅಧ್ಯಕ್ಷ ಸಿದ್ದೇಶ್, ಪುರಸಭೆ ಸದಸ್ಯರಾದ ಸುಧಾ ಬಸವರಾಜ್, ನಾಗರತ್ನ, ಮಲ್ಲಿಕಾರ್ಜುನ್ ಇತರರು ಇದ್ದರು.
–
ಫೊಟೋ – ೧೫ಜೆಪಿಎಚ್‌ಎಲ್‌ಕೆ೧
ಹೊಳಲ್ಕೆರೆ ಪಟ್ಟಣದ ಕೊಟ್ರೆನಂಜಪ್ಪ ಕಾಲೇಜು ಮೈದಾನದಲ್ಲಿ ಭಾನುವರ 75 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು…

ವರದಿ. ಸುರೇಶ್, ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;