ಚಿತ್ರದುರ್ಗ (ಅಗಸ್ಟ್-15) ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ತಹಸೀಲ್ದಾರ್ ಟಿ ಸುರೇಶ್ ಕುಮಾರ್ ರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು ಸ್ವಾತಂತ್ರ್ಯೋತ್ಸವ ಲಕ್ಷಾಂತರ ಜನರ ಹೋರಾಟ ತ್ಯಾಗ ಬಲಿದಾನಗಳ ಪ್ರತೀಕವಾಗಿದೆ. ಗಾಂಧೀಜಿಯವರ ಅಹಿಂಸಾ ತತ್ವ ಸುಭಾಶ್ ಚಂದ್ರ ಬೋಸ್ ರವರ ಉಗ್ರವಾದ ಹೋರಾಟಗಳು ಫಲವಾಗಿದೆ ಎಂದರು. ಪೊಲೀಸ್ ಇಲಾಖೆಯ ವತಿಯಿಂದ ರಾಷ್ಟ್ರಧ್ವಜಕ್ಕೆ ಕೌರವನು ಸಲ್ಲಿಸಿದರು. ನಂತರ ಬಾಲ್ಯವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಕ್ರಮದ ವಿವಿಧ ಅಧಿಕಾರಿಗಳು ಹಾಗೂ ತಾಲೂಕಿನ ಜನರು ಪ್ರಮಾಣವಚನ ಸ್ವೀಕರಿಸಿದರು. ನಂತರ ಕೋರನ ಸಂದರ್ಭದಲ್ಲಿ ಕರ್ತವ್ಯ ನಿರತರಾದ ಉತ್ತಮ ನೌಕರರಿಗೆ 50.ಜನಕ್ಕೆ ಸನ್ಮಾನ .ರಾಂಪುರ ಹೋಬಳಿ ಹಾಗೂ ಕಸಬಾ ಹೋಬಳಿಯ ಇಬ್ಬರಿಗೆ ಸನ್ಮಾನ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ವಿವಿಧ ಇಲಾಖೆಯ ನೌಕರರಿಗೆ ಸನ್ಮಾನ ತಾಲ್ಲೂಕಿನ ಇಬ್ಬರು ಪತ್ರಕರ್ತರಿಗೆಷಪ್ರಶಸ್ತಿ ಸನ್ಮಾನ ಮಾಡಲಾಯಿತು. ಸ್ವಾಗತ: ಯುವರಾಜ್ ನಾಯಕ್ ಕ್ಷೇತ್ರ ಶಿಕ್ಷಣಾಧಿಕಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಬಿ.ಓಬಣ್ಣ ನಿರೂಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಓ ಜಾನಕಿರಾಮ, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಣ್, ಸರ್ಕಲ್ ಇನ್ಸ್ಪೆಕ್ಟರ್ ಜಿ.ಬಿ ಉಮೇಶ್ ನಾಯಕ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಈರಣ್ಣ, ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ. ಪಿ. ಎಂ.ಮಂಜುನಾಥ್, ಸಬ್ ಇನ್ಸ್ಪೆಕ್ಟರ್ ಬಸವರಾಜ್, ಸಿಡಿಪಿಓ ಸವಿತಾ, ಟಿ.ಎಚ್.ಒ ಡಾ. ಸುಧಾ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
