;

ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಪಂಚಾಯತ್ ಆವರಣದಲ್ಲಿ ಮಹಿಳಾ ಕಾಯಕೋತ್ಸವ ಕಾರ್ಯಕ್ರಮ ನೆರವೇರಲಾಯಿತ್ತು…!!!

ಬೆಳಗಾವಿ :-ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಪಂಚಾಯತ್ ಆವರಣದಲ್ಲಿ ದಿನಾಂಕ 10/08/2021 ರಂದು ಮಂಗಳವಾರ ದಿವಸ ಮಹಿಳಾ ಕಾಯಕೋತ್ಸವ ಕಾರ್ಯಕ್ರಮ ನೆರವೇರಲಾಯಿತ್ತು. ಈ ಸಂದರ್ಭದಲ್ಲಿ ತಾಲೂಕಾ ಐ ಈ ಸಿ ಸಂಯೋಜಕರು ರಾಯಬಾಗ ಮುತ್ತರಾಜ
ಗದಾಡಿಯವರು ಮಾತನಾಡಿದ ಅವರು ಗ್ರಾಮೀಣ ಬಾಗದ ಜನರ ಅರೋಗ್ಯ, ಆರ್ಥಿಕವಾಗಿ ಸಾಮಾಜಿಕ ಸುಧಾರಣೆಗೆ ಸರಕಾರ ಈ ಮನರೇಗಾ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಅಂದರೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗಂಡು ಹೆಣ್ಣಿಗೆ ಸಮಾನ ಕೂಲಿ ನೀಡಲಾಗುತ್ತದೆ ಆದರೆ ಕೆಲವು ಗ್ರಾಮ ಪಂಚಾಯತಗಳಲ್ಲಿ ಮಹಿಳೆಯರು ಭಾಗವಹಿಸುವಿಕೆ ಪ್ರಮಾಣ ಕಡಿಮೆಯಾಗಿದೆ ಕೆಲಸದಲ್ಲಿ ಭಾಗವಹಿಸುವಂತೆ ಮಾಡುವ ಉದ್ದೇಶದಿಂದ ಜುಲೈ 15 ರಿಂದ ಸೆಪ್ಟೆಂಬರ್ 15 ರ ವರೆಗೆ ಎರಡುತಿಂಗಳ ಕಾಲ ಗ್ರಾಮ ಪಂಚಾಯತ ಮಟ್ಟದಲ್ಲಿ ಮಹಿಳಾ ಕಾಯಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಆದುದರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಕುಟುಂಬದ ಮಹಿಳೆಯರು ಈ ನರೇಗಾ ಯೋಜನೆಯ ಜಾಬ್ ಕಾರ್ಡ್ ಪಡೆದು ಕಡ್ಡಾಯವಾಗಿ 100 ದಿವಸ ಕೆಲಸವನ್ನು ಪೂರೈಸಿ ತಮ್ಮ ಕುಟುಂಬದ ಆರ್ಥಿಕತೆ ಮಟ್ಟವನು ಹೆಚ್ಚಿಸಕೊಳಬೇಕು ಎಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿರುದ್ದಿ ಅಧಿಕಾರಿಗಳಾದ ಶ್ರೀಮತಿ ಸುಜಾತಾ ಚಿನಗುಂಡಿ, ಅಧ್ಯಕ್ಷರಾದ ಶ್ರೀಸೈಲ ಪಾಟೀಲ, ಎಲ್ಲ ಸದಸ್ಯರು ಹಾಗೂ ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ :-ಮಹಾಲಿಂಗ ಹ ಗಗ್ಗರಿ ಬೆಳಗಾವಿ ಜಿಲ್ಲಾ ವರದಿಗಾರರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;