;

ಸಿಂಧನೂರ :75ನೇ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ವೆಂಕಟರಾವ್ ನಾಡಗೌಡರಿಂದ ಕೃಷಿ ಅಭಿಯಾನಕ್ಕೆ ಚಾಲನೆ.

ಸಿಂಧನೂರ :75ನೇ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ವೆಂಕಟರಾವ್ ನಾಡಗೌಡರಿಂದ ಕೃಷಿ ಅಭಿಯಾನಕ್ಕೆ ಚಾಲನೆ.

75ನೇ ಸ್ವಾತಂತ್ರ್ಯ ದಿನಾಚರಣೆ ದಿನದಂದು ಕೃಷಿಇಲಾಖೆಯು ಆಯೋಜಿಸಲಾಗಿದ್ದ ಕೃಷಿ ಅಭಿಯಾನ 2021 22 ನೇ ಸಾಲಿನಲ್ಲಿ ” ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಶೀರ್ಷಿಕೆಯಡಿ ಕೃಷಿ ರಥಕ್ಕೆ ಶಾಸಕ ನಾಡಗೌಡರು ಹಸಿರು ಧ್ವಜ ಹಿಡಿದು ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಪುಸ್ತಕ ಮತ್ತು ಕರಪತ್ರ ಬಿಡುಗಡೆ ಮಾಡಿದರು.

ಈ ಅಭಿಯಾನವು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದು ಸಂತೋಷ. ಈ ಅಭಿಯಾನದ ಉದ್ದೇಶ ಗ್ರಾಮೀಣ ಭಾಗದ ರೈತರ ಮನೆ ಮನೆಗೆ ಹೋಗಿ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಸಹಕಾರಿಯಾಗಲಿದೆ.ರೈತರು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಪಡೆದು ಕೊಳ್ಳಬೇಕು, ರೈತರು ಕೃಷಿ ಅಧಿಕಾರಿಗಳ ಸಲಹೆ ಪಡೆದು ವಿವಿಧ ಬೆಳೆಗಳನ್ನು ಬೆಳೆದು ತಾಲೂಕಿನ ಜನ ರಾಜ್ಯಕ್ಕೆ ಮಾದರಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ತಾಲೂಕ್ ದಂಡಾಧಿಕಾರಿಗಳಾದ ಮಂಜುನಾಥ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಪವನ್ ಕುಮಾರ್,ಕೃಷಿಅಧಿಕಾರಿಗಳಾದ ಪ್ರಶಾಂತ್ ಕುಮಾರ್, ಇಬ್ರಾಹಿಂ ಇನ್ನೂ ಅನೇಕರು ಭಾವಿಸಿದ್ದರು..

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;