ಅಗಲಿದ ಪತ್ರಕರ್ತ ಗುಡಿಹಳ್ಳಿ ನಾಗರಾಜ:ಕೂಡ್ಲಿಗಿ ಪತ್ರಕರ್ತರಿಂದ ಸಂತಾಪ..- ವಿಜಯನಗರ ಜಿಲ್ಲೆ ಕೂಡ್ಲಿಗಿ, ರಾಜ್ಯ ಕಂಡ ಹಿರಿಯ ಪತ್ರಕರ್ತರಲ್ಲಿ ಓರ್ವರು ಹಾಗೂ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷರು.ಪ್ರೆಸ್ಕ್ಲಬ್ ರಾಜ್ಯ ಉಪಾಧ್ಯಕ್ಷರು, ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕರಾಗಿ,ಕನ್ನಡ ನಾಡು ಸಂಸ್ಕೃತಿ ಸಾಹಿತ್ಯ ಲೋಕದೊಂದಿಗೆ ಗುರುತಿಸಿಕೊಂಡಿದ್ದ. ಹಿರಿಯ ಪತ್ರಕರ್ತರಾದ ಗುಡಿಹಳ್ಳಿ ನಾಗರಾಜ ಗುರುವಾರ ನಿಧನರಾಗಿದ್ದು,ಅವರ ಅಗಲಿಕೆಗೆ ಕರ್ನಾಟ ಪತ್ರಕರ್ತರ ಸಂಘದ ಕೂಡ್ಲಿಗಿ ಘಟಕದ ಪದಾಧಿಕಾರಿಗಳು ಸಂತಾಪ ವ್ಯೆಕ್ತ ಪಡಿಸಿದ್ದಾರೆ.
ಅವರು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ರಾಜ್ಯೋತ್ಸವ ಪ್ರಶಸ್ತಿ,ಕೆಂಪೇಗೌಡ, ಮುರುಘರಾಜೇಂದ್ರ,ನಾಟಕ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಕರ್ನಾಟಕದ ವೃತ್ತಿ ರಂಗಭೂಮಿಯ ಬಗ್ಗೆ ಅಳವಾದ ಜ್ಞಾನ ಹೊಂದಿದ್ದ, ಹಲವು ನಟ-ನಟಿಯರ ಜೀವನಚರಿತ್ರೆಗಳನ್ನು ಬರೆದಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ.
ಅವರಿಗೆ 67 ವರ್ಷ ವಯಸಾಗಿತ್ತು
ಹರಪನಹಳ್ಳಿ ತಾಲ್ಲೂಕು ಗುಡಿಹಳ್ಳಿ ಅವರ ಹುಟ್ಟೂರು.
ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಎಂಎ ಇಂಗ್ಲಿಷ್ ಪದವಿ ಪಡೆದು, ಹರಪನಹಳ್ಳಿಯಲ್ಲಿ ಮೂರು ವರ್ಷ (1980-83) ಉಪನ್ಯಾಸಕರಾಗಿದ್ದರು.
1983ರಲ್ಲಿ ಪ್ರಜಾವಾಣಿ ಸೇರಿ ಸುಮಾರು 31 ವರ್ಷ ಕಾಲ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಎಂ.ಪಿ.ಪ್ರಕಾಶ ಸೇರಿದಂತೆ ರಾಜ್ಯದ ಪ್ರಭಾವಿಗಳ ಆತ್ಮೀಯ ಒಡನಾಡಿಗಳಾಗಿದ್ದರು.
ಕರ್ನಾಟಕ ರಂಗಭೂಮಿಯ ಬಗ್ಗೆ ಅಪಾರ ಪ್ರೀತಿ ಮತ್ತು ಅಭಿಮಾನಗಳನ್ನು ಗುಡಿಹಳ್ಳಿ ನಾಗರಾಜ ಹೊಂದಿದ್ದರು.
*ಶ್ರದ್ಧಾಂಜಲಿ ಅರ್ಪಣೆ*-
ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜರವರ ಅಗಲಿಕೆ ಹಿನ್ನಲೆಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಕೂಡ್ಲಿಗಿ ಘಟಕದ ಪದಾಧಿಕಾರಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ,
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬೆಳ್ಳಗಟ್ಟೆ ಕೃಷ್ಣಪ್ಪ ನುಡಿನಮನ ಅರ್ಪಿಸಿದರು.
ಗುಡಿಹಳ್ಳಿ ನಾಗರಾಜರ ಅಗಲಿಕೆ ಪತ್ರಕರ್ತರ ಸಂಘಕ್ಕೆ ಅಘಾತವನ್ನುಂಟು ಮಾಡಿದೆ.
ಅವರು ಹದಿನೈದಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ರಂಗನೇಪಥ್ಯ ಎಂಬ ಮಾಸಪತ್ರಿಕೆ ಪ್ರಕಟಿಸುತ್ತಿದ್ದರು, ನಾಲ್ಕು ರಂಗತಂಡಗಳ ನೇತೃತ್ವವನ್ನೂ ವಹಿಸಿಕೊಂಡಿದ್ದರು.
ರಂಗನಾಟಕ ಪ್ರಯೋಗ ಸಾರ್ಥಕತೆ, ಮಾಲತಿಶ್ರೀ ಮೈಸೂರು ಆತ್ಮಕತೆ (ತೆರೆ ಸರಿದಾಗ),ಮರಿಯಮ್ಮನಹಳ್ಳಿ ಡಾ.ನಾಗರತ್ನಮ್ಮ ಆತ್ಮಕತೆ (ರಂಗಸಿರಿ),ಗುಬ್ಬಿ ವೀರಣ್ಣ, ಡಾ.ಲಕ್ಷ್ಮಣದಾಸ್,ಗಾನಕೋಗಿಲೆ, ಅನುಪಮ ಅಭಿನೇತ್ರಿ ಸುಭದ್ರಮ್ಮ ಮನ್ಸೂರು,ಮೇಕಪ್ಮನ್ ಸುಬ್ಬಣ್ಣ,ರಂಗನೇವರಿಕೆ, ರಂಗಸಂದರ್ಶನ,ರಂಗದಿಗ್ಗಜರು, ಚಿಂದೋಡಿ ಲೀಲಾ,ಕಲಾಗ್ರಾಮ, ಜನಪರ ರಂಗಭೂಮಿ,ರಂಗಸೆಲೆ ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.
ಅವರ ಅಗಲಿಕೆಯಿಂದ ಕನ್ನಡದ ಸಾರಸ್ವತ ಲೋಕಕ್ಕೆ,ವೃತ್ತಿ ರಂಗಭೂಮಿ,ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಗುಡಿಹಳ್ಳಿ ನಾಗರಾಜರಿಗೆ ಅರ್ಪಿಸಿದ್ದಾರೆ,ಈ ಸಂದರ್ಭದಲ್ಲಿ ಸಂಘದ ಹಿರಿಯ ಪತ್ರಕರ್ತರು ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು…

ವರದಿ. ಬಸಣ್ಣಿ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
