ಮೈಸೂರು: ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ನೀಚ ಕೃತ್ಯ ಎಸಗಿದ್ದ ಆರೋಪಿಗಳು ತಮಿಳುನಾಡಿಗೆ ಹೋಗಿದ್ದರು. ಕೇರಳ ಹಾಗೂ ತಮಿಳುನಾಡಿಗೆ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಬಳಿಕ ತಮಿಳುನಾಡಿನಲ್ಲಿ ಕೀಚಕರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ವಿದ್ಯಾರ್ಥಿಗಳಲ್ಲ ಎಂದು ಹೇಳಲಾಗಿದೆ.
ಘಟನೆ ನಡೆದ 84 ಗಂಟೆಗಳ ಬಳಿಕ ಪಾತಕ ಕೃತ್ಯ ಎಸಗಿದ ಕಾಮುಕರ ಹೆಡೆಮುರಿ ಕಟ್ಟಿದ್ದಾರೆ. ಸಂತ್ರಸ್ತೆ ಹಾಗೂ ಸಂತ್ರಸ್ತೆಯ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿರಲಿಲ್ಲ. ಆದ್ರೆ ಸಂತ್ರಸ್ತೆ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾನು ನನ್ನ ಸ್ನೇಹಿತೆ ಹೋದಾಗ ಕಲ್ಲಿನಿಂದ ನನಗೆ ಹೊಡೆದರು. ಆ ಬಳಿಕ ಹದಿನೈದು ನಿಮಿಷಗಳ ಬಳಿಕ ಪೊದೆಯಿಂದ ಯುವತಿ ಕರೆದುಕೊಂಡು ಬಿಟ್ಟಿದ್ದರು. ಅರೆಬರೆ ಕನ್ನಡ ಮಾತನಾಡುತ್ತಿದ್ದರು ಎಂಬ ಮಾಹಿತಿಯನ್ನು ಸಂತ್ರಸ್ತೆ ಯುವತಿ ಸ್ನೇಹಿತ ಹೇಳಿದ್ದು, ಬಳಿಕ ಅತ್ಯಾಚಾರ ಎಸಗಿದ್ದರು. ಆರೋಪಿಗಳ ಮುಖಚಹರೆಯ ಬಗ್ಗೆಯೂ ಮಾಹಿತಿ ನೀಡಿದ್ದ ಕಾರಣ ಆರೋಪಿಗಳನ್ನು ಪತ್ತೆ ಹಚ್ಚಲು ಸಹಕಾರಿಯಾಯ್ತು.
ತಮಿಳುನಾಡು ಮೂಲದ ಆರೋಪಿಗಳು ಈ ಹಿಂದೆ ಇದೇ ರೀತಿಯ ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ. ಇನ್ನು ಯುವಕ ಹಾಗೂ ಯುವತಿಯ ಚಲನವಲನ ಗಮನಿಸಿದ್ದರಾ ಕಿರಾತಕರು ಎಂಬ ಅನುಮಾನವೂ ಕಾಡುತ್ತಿದೆ. ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು ಆರೋಪಿಗಳ ವಿಚಾರಣೆ ಮುಂದುವರಿಸಿದ್ದಾರೆ. ಪೊಲೀಸರ ಈ ಚಾಕಚಕ್ಯತೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ….

ವರದಿ. ಎಚ್ಚರಿಕೆ ಪತ್ರಿಕಾ ವರದಿಗಾರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
