ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು ಗ್ರಾಮ ಕ್ರಿಯಾಯೋಜನೆಯ ತಯಾರಿಕೆ ಗ್ರಾಮ ಸಭೆ ನಡೆಯಿತು. ಚಿತ್ರದುರ್ಗ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸುರಭಿ ಸಮಗ್ರ ಮಾನವ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಯೋಜನೆ ಅನುಷ್ಠಾನ ಕುರಿತಾದ ಸಭೆ ಯಾಗಿದೆ. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ 2023ರ ಒಳಗಾಗಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಿ ವಾಟರ್ ಮೀಟರ್ ಅಳವಡಿಸುವ ಮುಖಾಂತರ ಪ್ರತಿ ವ್ಯಕ್ತಿಗೆ ದಿನಕ್ಕೆ 55 ಲೀಟರ್ ನಂತೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಮನೆಮನೆಗಳಿಗೆ ಸರಬರಾಜು ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸುರಭಿ ಸಂಸ್ಥೆಯ ಅಧ್ಯಕ್ಷರಾದ ಉಮೇಶ ತಿಳಿಸಿದರು. ಕಾರ್ಯಕ್ರಮದಲ್ಲಿ ಜಲಜೀವನ್ ಮಿಷನ್ ಯೋಜನೆ ಕುರಿತಂತೆ ಜಿಲ್ಲಾ ವ್ಯವಸ್ಥಾಪಕರಾದ ಮಂಜುನಾಥ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಪಾಲಯ್ಯ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಭಾಗವಹಿಸಿದ್ದರು…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
