;

ಯೋಗಿ ವಿರುದ್ಧ ಸ್ಪರ್ಧಿಸುತ್ತೇನೆ ಎಂದಿದ್ದ ಮಾಜಿ ಐಪಿಎಸ್ ಅಧಿಕಾರಿ ಅರೆಸ್ಟ್!!!!!!

ಯೋಗಿ ವಿರುದ್ಧ ಸ್ಪರ್ಧಿಸುತ್ತೇನೆ ಎಂದಿದ್ದ ಮಾಜಿ ಐಪಿಎಸ್ ಅಧಿಕಾರಿ ಅರೆಸ್ಟ್!!!!!!

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದ ಮಾಜಿ ಐಪಿಎಸ್ ಅಧಿಕಾರಿಯನ್ನು ಉತ್ತರ ಪ್ರದೇಶ ಪೊಲೀಸರು ಬಲವಂತವಾಗಿ ಬಂಧಿಸಿ ಕರೆದೊಯ್ದ ಘಟನೆ ನಡೆದಿದೆ.

ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಬಂಧನಕ್ಕೊಳಗಾದವರಾಗಿದ್ದು, ಮಹಿಳೆಯೊಬ್ಬರ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧನದ ವೇಳೆ ಅಮಿತಾಬ್, ತನಗೆ ಎಫ್ ಐಆರ್ ಪತ್ರವನ್ನು ತೋರಿಸಿ ಎಂದು ಕೇಳಿದ್ದಾರೆ. ಆದರೆ, ಪೊಲೀಸರು ಬಲವಂತ ಮಾಡಿ ಜೀಪ್ ಹತ್ತಿಸಲು ಪ್ರಯತ್ನಿಸಿದ್ದಾರೆ.

ಎಫ್ ಐ ಆರ್ ಪತ್ರವನ್ನು ತೋರಿಸದೇ ನಾನು ನಿಮ್ಮ ಜೊತೆಗೆ ಬರುವುದಿಲ್ಲ ಎಂದು ಅವರು ಹೇಳಿದರೂ, ಪೊಲೀಸರು ಬಲವಂತವಾಗಿ ಅವರನ್ನು ಜೀಪ್ ಗೆ ತುಂಬಿಸುತ್ತಿರುವ ವಿಡಿಯೋವನ್ನು ಸಮಾಜವಾದಿ ಪಾರ್ಟಿಯ ನಾಯಕ ಅಖಿಲೇಶ್ ಯಾದವ್ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ…

ನ್ಯೂಸ್ ಬ್ಯುರೋ, ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;