ಶಟಲ್ ಬ್ಯಾಡ್ಮಿಂಟನ್ ಗೆಳೆಯರ ಬಳಗ ಓಪನ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನೆ ಕಾರ್ಯಕ್ರಮ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದಲ್ಲಿ ಶಟಲ್ ಬ್ಯಾಡ್ಮಿಂಟನ್ ಗೆಳೆಯರ ಬಳಗ ಓಪನ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಭಾರತದಲ್ಲಿ ಕ್ರೀಡೆಗೆ ಯುವ ಸಮುದಾಯದಿಂದ ಹೆಚ್ಚಿನ ಒಲವು ವ್ಯಕ್ತವಾಗುತ್ತಿದೆ. ಭಾರತದಲ್ಲಿ ಕಿರ್ಕೆಟ್ ಮೊದಲನೇ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಯುವಜನತೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಆಟಗಳು ಸ್ಪರ್ಧಾತ್ಮಕ ಮನೋಭಾವನೆಯೊಂದಿಗೆ ಆರೋಗ್ಯದಿಂದ ಕೂಡಿರಬೇಕು ಎಂದು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವ ಮುಖಂಡ ಬಿ ವಿಜಯ್ ಹೇಳಿದರು. ಟೂರ್ನಮೆಂಟ್ ನಲ್ಲಿ ನೆರೆಯ ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕದ ಉಡುಪಿ ಶಿವಮೊಗ್ಗ ವಿಜಯನಗರ ಚಿತ್ರದುರ್ಗ ಹಲವು ಜಿಲ್ಲೆಗಳ 50 ತಂಡಗಳು ಭಾಗವಹಿಸಿದ್ದು ವಿಶೇಷವಾಗಿತ್ತು. ಎರಡು ದಿನಗಳ ಕಾಲ ನಡೆಯುವ ಟೂರ್ನಮೆಂಟ್ ಆಗಿದ್ದು ಪ್ರಥಮ ಬಹುಮಾನ 25 ಸಾವಿರ ದ್ವಿತೀಯ ಬಹುಮಾನ 15000 ತೃತೀಯ ಬಹುಮಾನ 6000 ರೂಪಾಯಿಗಳು ನಿಗದಿಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಬ್ಇನ್ಸ್ಪೆಕ್ಟರ್ ಬಸವರಾಜ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಪಿ ಲಕ್ಷ್ಮಣ ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ. ಮಂಜುನಾಥ ಮುಖಂಡರಾದ ಖಾದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend