ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರದಂದು ಜಿಲ್ಲಾ ಪಂಚಾಯಿತಿ ಸಿಇಓ. ಡಾ. ನಂದಿನಿ ದೇವಿಯವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ತಾಲೂಕಿನಲ್ಲಿ ನರೇಗಾ ಕಾಮಗಾರಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ 25 ರಂತೆ ಎರೆಹುಳು ಘಟಕ ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಗ್ರಾಮಪಂಚಾಯಿತಿಗಳು ಘಟಕ ನಿರ್ಮಾಣ ಕಾರ್ಯಕ್ಕೆ ರೈತರಿಗೆ ಉತ್ತೇಜಿಸಬೇಕು. ಗ್ರಾಮಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು ಶೌಚಾಲಯ ನಿರ್ಮಾಣ ಕಾರ್ಯಗಳು ಸಂಪೂರ್ಣ ಕೊಳ್ಳಬೇಕು. ಶಾಲೆಗಳಲ್ಲಿ ಆಟದ ಮೈದಾನ ಮತ್ತು ಕಾಂಪೌಂಡ್ ನಿರ್ಮಾಣ ಮಾಡಲು ಯೋಜನೆ ರೂಪಿಸಬೇಕು. ಕೃಷಿ ಇಲಾಖೆ ತೋಟಗಾರಿಕೆ ಇಲಾಖೆ ಸೇರಿದಂತೆ ನಿಗಮ-ಮಂಡಳಿಗಳ ಕಾರ್ಯ ಯೋಜನೆಗಳ ವಾರ್ಷಿಕ ಗುರಿಯನ್ನು ಮುಟ್ಟಬೇಕು. ಇಲಾಖೆಗಳ ಅನುದಾನ ಸಂಪೂರ್ಣ ಸದ್ಬಳಕೆ ಆಗಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ. ನಂದಿನಿದೇವಿ ಅಧಿಕಾರಿಗಳಿಗೆ ಹೇಳಿದರು. ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ಜಾನಕೀರಾಮ ಎ.ಡಿ.ಎ ಸಂಪತ್ ಕುಮಾರ್ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
