ಹೊಸಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ…!!!

ಹೊಸಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಗಣೇಶ ನಗರದ 8 ನೇ ವಾರ್ಡಿನಲ್ಲಿ ಚರಂಡಿ ಇಲ್ಲದೆ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಚರಂಡಿ ನಿರ್ಮಿಸಿಕೊಡುವಂತೆ ಒತ್ತಾಯಿಸಿ ಗಣೇಶನಗರ 8 ನೇ ವಾರ್ಡಿನ ಮಹಿಳೆಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಹೊಸ ಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಸೋಮವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್ ಮಾತನಾಡಿ ಕೊಳಚೆ ನೀರು ಚರಂಡಿ ಇಲ್ಲದ ರಸ್ತೆಯ ಮೇಲೆ ಹರಿದು ಕೊಳಚೆ ನೀರಿನಿಂದ ಸೊಳ್ಳೆಗಳು ಕ್ರಿಮಿಕೀಟಗಳು ಹೆಚ್ಚಾಗಿ ಅಕ್ಕಪಕ್ಕದ ಮನೆಯವರಿಗೆ ರೋಗರುಜಿನಗಳು ಬರುತ್ತವೆ ಎಂದು ಅನೇಕ ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಮುಕ್ಬುಲ್ ಮಾತನಾಡಿ ಸುಮಾರು ವರ್ಷಗಳಿಂದ ಇದೇ ಸಮಸ್ಯೆ ಇದೆ ಗ್ರಾಮ ಪಂಚಾಯಿತಿ ಮನವಿ ಮಾಡಿದರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು .
ಚರಂಡಿ ಕಾಮಗಾರಿ ಪ್ರಾರಂಭ ಮಾಡುವವರೆಗೂ ಪ್ರತಿಭಟನೆ ವಾಪಸ್ ಹಿಂಪಡೆಯುವುದಿಲ್ಲ ವೆಂದು ಪ್ರತಿಭಟನಾಕಾರರು ಪಟ್ಟುಹಿಡಿದರು ಸ್ಥಳಕ್ಕೆ ಆಗಮಿಸಿದ ಹೊಸಹಳ್ಳಿ ಪಿಎಸ್ಐ ತಿಮ್ಮಣ್ಣ ಚಾಮನೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನೀಲಮ್ಮ ಬೊಮ್ಮಯ್ಯ ಹಾಗೂ ತಾಲೂಕು ಪ್ರಭಾರಿ ಸಹಾಯಕ ನಿರ್ದೇಶಕ ಬೋರಯ್ಯ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಚರಂಡಿ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯೆ ಮಂಜಮ್ಮ ಮುಖಂಡರಾದ ಭಾಗ್ಯಮ್ಮ ಕವಿತಾ ಜಾನಕಮ್ಮ ಬೋರಮ್ಮ ವಿಶಾಲಮ್ಮ ಮಾಯಮ್ಮ ಶಾಹಿನ ಓಂಕಾರಮ್ಮ ಗಂಗಮ್ಮ ಸೂರ್ಯಪ್ರಕಾಶ್ ನಾಗಭೂಷಣ ಜಾವಿದ್ ಹೋಬಳಿ ಸಿ ಸೋಮಣ್ಣ ಎಚ್ ಬಿ ಸತೀಶ್ ಸೇರಿ ಇತರರು ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend