;

ಮೊಳಕಾಲ್ಮುರು: ಕುಡಿಯುವ ನೀರಿಗೆ ಸಂಪರ್ಕ ಕಲ್ಪಿಸುವ ಪೈಪ್ ನಲ್ಲಿ ನೀರು ಹರಿದು ವ್ಯರ್ಥ.!

ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಅತಿ ಕಡಿಮೆ ಮಳೆ ಬೀಳುವ ಪ್ರದೇಶವೆಂದರೆ ಮೊಳಕಾಲ್ಮೂರು ತಾಲ್ಲೂಕು. ಈ ತಾಲೂಕು ಬಯಲು ಪ್ರದೇಶ ಬರದ ನಾಡು ಎಂದು ಪ್ರಖ್ಯಾತಿ ಗಳಿಸಿದೆ. ಬೇಸಿಗೆ ಕಾಲ ಬಂತೆಂದರೆ ಪ್ರತಿವರ್ಷವೂ ಇಲ್ಲಿ ಕುಡಿಯುವ ನೀರಿಗೆ ಹಾಹಾಕಾರ ವಾಗುತ್ತದೆ. ಈ ತಾಲೂಕಿನಲ್ಲಿ ಯಾವುದೇ ನೀರಾವರಿ ಸೌಲಭ್ಯಗಳಿಲ್ಲದೆ ವಂಚಿತವಾಗಿದ್ದು ಕುಡಿಯುವ ನೀರಿಗೂ ಸಹ ಇಲ್ಲಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇಂಥ ಸಮಯದಲ್ಲಿ ಗ್ರಾಮ ಪಂಚಾಯಿತಿ ಗಳಿಗೆ ಸರಕಾರಿ ಕುಡಿಯುವ ನೀರು ನಿವಾರಣೆಗೆ ಲಕ್ಷಗಟ್ಟಲೆ ಹಣ ವ್ಯಯ ಮಾಡುತ್ತಿದ್ದು ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮೊಳಕಾಲ್ಮೂರು ತಾಲೂಕಿನ ನೇರ್ಲಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯಿಂದ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿರು ಪೈಪ್ ನಿಂದ ನೀರು ವ್ಯರ್ಥವಾಗುತ್ತಿದೆ. ಪ್ರತಿಯೊಂದು ಹನಿಯು ಜೀವ ಹನಿ ಎಂಬುದನ್ನು ಅರ್ಥ ಮಾಡಿಕೊಳ್ಳದ ಅಧಿಕಾರಿಗಳು ಪೈಪ್ ದುರಸ್ತಿಪಡಿಸಿ ವ್ಯರ್ಥವಾಗುತ್ತಿರುವ ನೀರನ್ನು ಉಳಿಸಲು ಪೈಪ್ ರಿಪೇರಿ ಮಾಡಿಸುವಂತೆ ಅಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;