ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದಲ್ಲಿ ಇಂದು (ಸ-23) ಪೌರಾಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಪಟ್ಟಣ ಪಂಚಾಯಿತಿ ವತಿಯಿಂದ ಪೌರಾಕಾರ್ಮಿಕರಿಗೆ ಕ್ರಿಡಾಕೂಟ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ ಲಕ್ಷ್ಮಣ್ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಕೆಎನ್ ಶುಭ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕಾಂತರಾಜು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ, ಒಬ್ಬಣ್ಣ ಶಿಕ್ಷಕರು, ಸದಸ್ಯರಾದ ಮಂಜಣ್ಣ, ಲೀಲಾವತಿ, ಲಕ್ಷ್ಮೀದೇವಿ, ತಿಪ್ಪೇಸ್ವಾಮಿ, ಕಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀನಿವಾಸ ಪೌರಕಾರ್ಮಿಕರಾದ ಸಿದ್ದಪ್ಪ, ಗಂಗಮ್ಮ, ಮಲ್ಲಮ್ಮ, ಕೃಷ್ಣಮೂರ್ತಿ, ಡಿ ಸಿದ್ದಪ್ಪ, ನಾಗರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
