ರಾಜ್ಯದಲ್ಲಿ ಆಪರೇಷನ್ ಹಸ್ತ ಆರಂಭ? | ಬಿಜೆಪಿಯ ಮೊದಲ ವಿಕೆಟ್ ಪತನ?
ತುಮಕೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ಸದ್ದಿಲ್ಲದೇ ಆರಂಭವಾಗಿದೆ ಎನ್ನುವ ಮಾತುಗಳು ಇದೀಗ ಕೇಳಿ ಬಂದಿದೆ. ಇದೀಗ ಆಪರೇಷನ್ ಹಸ್ತಕ್ಕೆ ಬಿಜೆಪಿ ಮೊದಲ ವಿಕೆಟ್ ಪತನವಾಗಿದೆ ಎನ್ನುವ ವರದಿ ಬಂದಿದೆ. ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆನ್ನಲಾಗಿದ್ದು, ಇದು ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೀಡು ಮಾಡಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸುರೇಶ್ ಗೌಡ ಅವರು, ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುವ ಸುಳಿವು ನೀಡಿದ್ದಾರೆ ಎನ್ನುವ ಮಾತುಗಳು ಇದೀಗ ಕೇಳಿ ಬಂದಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಂಬಂಧಿಕರೂ ಆಗಿರುವ ಬಿ.ಸುರೇಶ್ ಗೌಡ ಕಾಂಗ್ರೆಸ್ ಗೆ ಸೇರ್ಪಡೆಗೊಂಡರೂ ಅಚ್ಚರಿಯಿಲ್ಲ ಎನ್ನುವ ಮಾತುಗಳು ಇದೀಗ ಕೇಳಿ ಬಂದಿವೆ.
ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಎರಡು ಬಾರಿ ಗೆಲುವು ಸಾಧಿಸಿರುವ ಸುರೇಶ್ ಗೌಡ ಅವರು, ಮಾಜಿ ಸಿಎಂ, ಹಿರಿಯ ಬಿಜೆಪಿ ಮುಖಂಡ ಯಡಿಯೂರಪ್ಪನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರು. ಯಡಿಯೂರಪ್ಪ ಪದ ತ್ಯಾಗದ ಬೆನ್ನಲ್ಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು.
ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಅನ್ನು ಹಗುರವಾಗಿ ಪರಿಗಣಿಸುತ್ತಿದ್ದಾರೆ. ಧರ್ಮದ ವಿಚಾರವೊಂದೇ ಚುನಾವಣೆ ಗೆಲ್ಲಲು ಸಾಕು ಎನ್ನುವ ಭ್ರಮೆಯಲ್ಲಿ ಬಿಜೆಪಿ ನಾಯಕನಾಗಿರುವ. ಈ ಬಗ್ಗೆ ಯಡಿಯೂರಪ್ಪನವರೇ ಎಚ್ಚರಿಕೆ ನೀಡಿದ್ದರು, ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ, ಅವರಿಗೆ ಅವರದೇ ಆದ ಶಕ್ತಿ, ಸಾಮರ್ಥ್ಯ ಇರುವುದು ಎಂದಿತ್ತು.
ರಾಜ್ಯದಲ್ಲಿ ಕೇವಲ ಧರ್ಮ, ಮತಾಂತರ ಎಂಬ ಎರಡು ವಿಚಾರವನ್ನಿಟ್ಟುಕೊಂಡು ಚುನಾವಣೆ ಗೆಲ್ಲಬಹುದು ಎಂದು ಭ್ರಮೆಯಲ್ಲಿ ಬಿಜೆಪಿ ಇದೆ. ಆದರೆ, ಜನ ಸಾಮಾನ್ಯರ ಸಮಸ್ಯೆಗಳು ಮುಂದಿನ ಚುನಾವಣೆಯ ಪ್ರಮುಖ ವಿಚಾರವಾಗಿದೆ ರಾಜ್ಯ ಬಿಜೆಪಿ ಮರೆತಂತಿದೆ. ರಾಜ್ಯದ ಸರ್ಕಾರ ಅನ್ನೋದು ಇದೆಯಾ ಎಂದು ಸಾರ್ವಜನಿಕ ಪ್ರದೇಶದ ಜನರು ಪ್ರಶ್ನಿಸುವ ಸಮಯ. ಈ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿಗಿಂತಲೂ ಪ್ರಬಲವಾಗಿ ಪಕ್ಷ ಸಂಘಟನೆ ಮಾಡುತ್ತಿವೆ ….

ವರದಿ ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
