ಸಿಂಧನೂರು : ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆ ಖಂಡಿಸಿ ಸಿಂಧನೂರಿನಲ್ಲಿ ಎಐಟಿಯುಸಿ, ಸಿಪಿಐಎಂಎಲ್ ಪ್ರತಿಭಟನೆ ಮಾಡಲಾಯಿತು. ಸರ್ಕಾರದ ಕ್ರೌರ್ಯವನ್ನು ಖಂಡಿಸಿ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗನಾದ ಆಶೀಶ್ ಮಿಶ್ರಾನನ್ನು ಬಂಧಿಸಬೇಕು. ಸಚಿವ ಸ್ಥಾನದಿಂದ ಅಜಯ್ ಮಿಶ್ರಾರನ್ನು ಕಿತ್ತೊಗೆಯಬೇಕು ಎಂದು ಆಗ್ರಹಸಿದರು.
ಡಿ. ಎಚ್. ಕಂಬಳಿ ಮಾತನಾಡಿ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ರವರು ಸ್ವಲ್ಪವು ಮಾನವೀಯತೆ ಇಲ್ಲದೆ ವರ್ತಿಸುತ್ತಿದ್ದಾರೆ. ಇವರಿಬ್ಬರೂ ಬಂಡವಾಳ ಶಾಹಿಗಳ ಬೂಟು ನೆಕ್ಕುತ್ತಿದ್ದಾರೆ. ಹಾಗಾಗಿಯೇ ಪ್ರತಿನಿತ್ಯ ರೈತರ ಕೊಲೆಗಳುಯಾಗುತ್ತಿವೆ. ಇತ್ತೀಚೆಗೆ, ಸಚಿವ ಅಜಯ್ ಮಿಶ್ರಾ ತೆನಿ ಅವರು ರೈತರ ಪ್ರತಿಭಟನೆಯ ಕುರಿತು ಬಹಿರಂಗ ಬೆದರಿಕೆ ಹಾಕಿದ್ದರು. ಎಂದು ಕಿಡಿಕಾರಿದರು.
ಲಖೀಂಪುರ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣ ಹೋಮಕ್ಕೆ ಕಾರಣರಾದ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಮತ್ತು ಈ ಘಟನೆಯ ವಿಚಾರದಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಉತ್ತರಪ್ರದೇಶ ಸರ್ಕಾರದ ಮೇಲೆ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾನ್ಯ ತಹಸೀಲ್ದಾರ ಮುಖಾಂತರ ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಮನವಿಯನ್ನೂ ನೀಡಿದರು.
ಘಟನೆಯಲ್ಲಿ ನಾಲ್ವರು ರೈತರು ಹತ್ಯೆಯಾಗಿದ್ದಾರೆ. ಇನ್ನೂ ಹಲವು ರೈತ ನಾಯಕರು ಮತ್ತು ಪ್ರತಿಭಟನಾ ನಿರತ ರೈತರು ಗಂಭೀರ ಸ್ವರೂಪದಲ್ಲಿ ಘಾಯಗೊಳಿಸಿರುವ ಹೀನಕೃತ್ಯಕ್ಕೆ ಕಾರಣರಾದ ಸಚಿವರ ಮೇಲೆ ಮತ್ತು ಅವರ ಬೆಂಗಾವಲು ಪಡೆಯ ಮೇಲೆ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ನಾಗರಾಜ್ ಪೂಜಾರಿ ಅಗ್ರಹಿಸಿದ್ಧಾರೆ.ಈ ಸಂದರ್ಭದಲ್ಲಿ ಎಐಟಿಯುಸಿ, ಸಿಪಿಐಎಂಎಲ್ ಪದಾಧಿಕಾರಿಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು…
ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
