ಪೊಲೀಸರ ಬದಲು ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ | ಅನೈತಿಕ ಪೊಲೀಸ್ ಗಿರಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ,,,,,,,,,,!
ಸುಳ್ಯ: ಬಿಜೆಪಿ ಸರ್ಕಾರದ್ದು ಅತಿಯಾಗುತ್ತಿದೆ. ರಾಜ್ಯದಲ್ಲಿ ಕಾನೂನು ಹೋಗಿದೆ. ಪೊಲೀಸರು ಕೆಲಸ ಮಾಡುತ್ತಿಲ್ಲ, ಪೊಲೀಸರ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯಕ್ಕೆ ಪ್ರಕರಣವೊಂದರ ಸಂಬಂಧ ಸಾಕ್ಷಿ ಹೇಳಲು ಆಗಮಿಸಿದ್ದ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ರಾಜ್ಯದಲ್ಲಿ ನಡೆಯುತ್ತಿರುವ ಕಾನೂನು ಅವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಇತ್ತೀಚೆಗೆ ಟಿವಿ ಡಿಬೇಟ್ ನಲ್ಲಿ ಭಾಗವಹಿಸಿದ ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತೆಗೆ ಓರ್ವ ಬಹಿರಂಗವಾಗಿಯೇ ಹೊಡೆಯೋದಾಗಿ ಹೇಳಿದ್ದ. ಇದು ರಾಜ್ಯದ ಸದ್ಯದ ಸ್ಥಿತಿಯನ್ನು ತೋರಿಸುತ್ತಿದೆ ಎಂದು ಅವರು ಕರಾವಳಿಯಲ್ಲಿ ಧರ್ಮದ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ವಿರುದ್ಧ ಕಿಡಿಕಾರಿದರು.
ದೇಶದಲ್ಲಿ ಕಾನೂನೇ ಇಲ್ಲ. ಪ್ರತಿಭಟನೆ, ಹೋರಾಟ ಮಾಡುವುದು ಅವರವರ ಹಕ್ಕು. ಗಾಂಧೀಜಿ ಅಹಿಂಸೆಯ ಮೂಲಕ ಹೋರಾಟ ಮಾಡಿ ಅಂತಾ ಹೇಳಿದ್ದಾರೆ. ಹನ್ನೊಂದು ತಿಂಗಳಿಂದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವರ ಮಗ, ಉಪಮುಖ್ಯಮಂತ್ರಿ ಮಗ ಪ್ರತಿಭಟನಾಕಾರರನ್ನು ಕೊಲೆ ಮಾಡಿದ್ದಾರೆ. ಈ ಘಟನೆಯಲ್ಲಿ 4 ಜನ ಸತ್ತಿದ್ದಾರೆ. ಹೋರಾಟ ಮಾಡುತ್ತಿದ್ದವರನ್ನು ಗಾಡಿ ಹತ್ತಿಸಿ ಕೊಂದಿದ್ದಾರೆ. ಇವತ್ತಿಗೂ ಅವರನ್ನು ಅರೆಸ್ಟ್ ಮಾಡಿಲ್ಲ, ಮಂತ್ರಿಯ ರಾಜೀನಾಮೆಯನ್ನು ಸರ್ಕಾರ ಪಡೆದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
