;

ಹೆಸರಾಂತ ಹಿರಿಯ ಚಿಂತಕ, ಸಾಹಿತಿ ಹಾಗು ಪೋಷಕ ನಟ ಪ್ರೊ.ಜಿ.ಕೆ.ಗೋವಿಂದರಾವ್ ಅನಾರೋಗ್ಯದಿಂದ ನಿಧನ…!!!

ಹೆಸರಾಂತ ಹಿರಿಯ ಚಿಂತಕ, ಸಾಹಿತಿ ಹಾಗು ಪೋಷಕ ನಟ ಪ್ರೊ.ಜಿ.ಕೆ.ಗೋವಿಂದರಾವ್ ಅನಾರೋಗ್ಯದಿಂದ ಹುಬ್ಬಳ್ಳಿಯಲ್ಲಿ ಇಂದು ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಜಿ.ಕೆ. ಗೋವಿಂದ ರಾವ್​​ ತಮ್ಮ ಇಳಿ ವಯಸ್ಸಿನಲ್ಲೂ ರಂಗ ಚಟುವಟಿಕೆ ಮತ್ತು ಹೋರಾಟದಲ್ಲಿ ಸಕ್ರಿಯರಾಗಿದ್ದರು.
ಮೂಲತಃ ಇಂಗ್ಲೀಷ್​​ ಪ್ರೊಫೆಸರ್​ ಆಗಿದ್ದ ಜಿ.ಕೆ. ಗೋವಿಂದರಾವ್​​ ಕನ್ನಡದ ಮೇಲೆ ಅಪಾರ ಹಿಡಿತ ಹೊಂದಿದ್ದರು. ಕನ್ನಡದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಅವರು ಬಹುಮುಖ ಪ್ರತಿಭೆ. ಸಾಹಿತ್ಯದ ಜೊತೆಜೊತೆಗೆ ನಾಟಕ ರಂಗದಲ್ಲೂ ಜಿ.ಕೆ. ಗೋವಿಂದರಾವ್​ ಸಕ್ರಿಯರಾಗಿದ್ದರು. ಅಲ್ಲದೆ ಹಲವು ಸಿನಿಮಾ ಮತ್ತು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಯಾವುದೇ ಪಾತ್ರ ಕೊಟ್ಟರೂ ಜೀವಂತಿಕೆ ತುಂಬಬಲ್ಲ ಸಾಮರ್ಥ್ಯ ಜಿ.ಕೆ. ಗೋವಿಂದ ರಾವ್‌ವರಿಗಿತ್ತು.

ಗ್ರಹಣ, ಮಿಥಿಲೆಯ ಸೀತೆಯರು, ಕರ್ಫ್ಯೂ, ನಿಶ್ಯಬ್ದ, ಭೂಮಿ ತಾಯಿಯ ಚೊಚ್ಚಲ ಮಗ, ಅಜ್ಜು, ಶಾಸ್ತ್ರಿ ಮುಂತಾದ ಹಲವು ಸಿನಿಮಾಗಳಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.

ಸಾಹಿತ್ಯ ಕ್ಷೇತ್ರದಲ್ಲೂ ಸಾಧನೆ ಮಾಡಿರುವ ಜಿ.ಕೆ. ಗೋವಿಂದ ರಾವ್​, ಈಶ್ವರ ಅಲ್ಲಾ ಎಂಬ ಕಿರು ಕಾದಂಬರಿ, ಶೇಕ್ಸ್​ಪೀಯರ್​ ನಾಟಕ ಅಧ್ಯಯನ, ಶೇಕ್ಸ್​ಪೀಯರ್​ ಸಂವಾದ ಲೇಖನ ಮಾಲಿಕೆ, ನಡೆ ನುಡಿ ನಾಗರಿಕತೆ, ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್​​ ಮುಂತಾದ ಹಲವು ಕೃತಿಗಳನ್ನು ಬರೆದಿದ್ದಾರೆ.

ಚಳವಳಿಯಲ್ಜಿಲೂ ಮುಂಚೂಣಿಯಲ್ಲಿದ್ದ ಜಿ.ಕೆ. ಗೋವಿಂದರಾವ್​​ ಹೋರಾಟದ ಕ್ಷೇತ್ರದಲ್ಲಿ ಜಿಕೆಜಿ ಎಂದೇ ಚಿರಪರಿಚಿತರು. ಮಾನವ ಹಕ್ಕು ಉಲ್ಲಂಘನೆ, ಪ್ರಭುತ್ವದ ದೌರ್ಜನ್ಯ, ಅನ್ಯಾಯ ಅಕ್ರಮಗಳು ಎಲ್ಲೇ ನಡೆದರೂ ಜಿಕೆಜಿ ಹೋರಾಟ ಅಲ್ಲಿ ದಾಖಲಾಗುತ್ತಿತ್ತು. ಎಡಪಂಥೀಯ ಚಿಂತಕರ ಜೊತೆ ಗುರುತಿಸಿಕೊಂಡಿದ್ದ ಜಿ.ಕೆ. ಗೋವಿಂದ ರಾವ್​ ಪ್ರಗತಿಪರ ಹೋರಾಟಗಾರರಾಗಿದ್ದರು.

ಆದಿವಾಸಿ ವಿದ್ಯಾರ್ಥಿ ಬಂಧನದ ವಿರುದ್ಧದ ಹೋರಾಟ ಸೇರಿದಂತೆ ಕರ್ನಾಟಕದ ಬಹುತೇಕ ಚಳವಳಿಯಲ್ಲಿ ಜಿ.ಕೆ. ಗೋವಿಂದರಾವ್​​ ಭಾಗಿಯಾಗಿದ್ದರು. ಪ್ರಖರ ವಾಗ್ಮಿಯೂ ಆಗಿದ್ದ ಜಿಕೆಜಿ ಭಾಷಣ ಹಲವರನ್ನು ಪ್ರೇರೇಪಿಸುವಂತಿರುತ್ತದೆ. ಖಡಕ್​​ ಶೈಲಿಯಲ್ಲಿ ಭಾಷಣ ಮಾಡುವ ಅವರು, ಮೇಲ್ನೋಟಕ್ಕೆ ಕಠೋರದಂತೆ ಕಂಡು ಬಂದರೂ,ಮಾತೃಹೃದಯಿ ಎಂಬುದನ್ನು ಹತ್ತಿರದಿಂದ ಬಲ್ಲವರಿಗೆ ಗೊತ್ತು.

ಇಂದು ಮುಂಜಾನೆ ಜಿ.ಕೆ. ಗೋವಿಂದರಾವ್​ ನಿಧನರಾಗಿದ್ದರಿಂದ ಸಾಹಿತ್ಯ, ರಂಗಚಟುವಟಿಕೆ, ಸಿನಿಮಾ, ಪ್ರಗತಿಪರ ವಲಯಕ್ಕೆ ತುಂಬಲಾರದ ನಷ್ಟ. ಜಿಕೆಜಿ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ…

ವರದಿ. ಅಜಯ್, ಚ, ಹೂವಿನಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;