;

ಜೆಡಿಎಸ್ ಪರ ಅಲೆ, ಕಾಂಗ್ರೆಸ್-ಬಿಜೆಪಿ ಪಕ್ಷಗಳನ್ನು ಮತದಾರರು ತಿರಸ್ಕರಿಸಬೇಕು- ಜಿ.ಟಿ.ದೇವರಾಜ್ ಎತ್ತಿನಹಟ್ಟಿ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದಲ್ಲಿ ಜೆಡಿಎಸ್ ನಗರ ಘಟಕದ ಪದಾಧಿಕಾರಿಗಳ‌ ಆಯ್ಕೆ ಮತ್ತು ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಅವರು ಮಾತನಾಡಿದರು. ರೈತರ, ಬಡವರ, ಕೂಲಿ ಕಾರ್ಮಿಕರ ಪರವಾಗಿರುವ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಬೇಕು, ಜೆಡಿಎಸ್ ಪರ ಅಲೆ ಇದ್ದು  2023ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಸಂಭವನೀಯ ಅಭ್ಯರ್ಥಿ ಜಿ.ಟಿ.ದೇವರಾಜ್ ಎತ್ತಿನಹಟ್ಟಿ ಹೇಳಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು, ಯಾರ ಹಂಗು ಇಲ್ಲದೆ ಸಿಎಂ ಆದರೆ ದೇಶದಲ್ಲೇ ಕ್ರಾಂತಿಕಾರ ಬದಲಾವಣೆಯನ್ನು ಕುಮಾರಣ್ಣ ತರಲಿದ್ದಾರೆಂದು ಹೇಳಿದರು. ತಾಲ್ಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ಪಿ.ಎಸ್.ಗೋವಿಂದರಾಜು, ಅಲ್ಪಸಂಖ್ಯಾತ ಘಟಕದ ಟೌನ್ ಅಧ್ಯಕ್ಷರಾಗಿ ಸುಹೈಲ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಲಕ್ಷ್ಮೀಪತಿ, ಉಪಾಧ್ಯಕ್ಷರನ್ನಾಗಿ ಗಿರಿ.ಪಿ.ಟಿ.ಹಟ್ಟಿಯವರನ್ನು ಆಯ್ಕೆ ಮಾಡಲಾಯಿತು…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;