ಸಿಂಧನೂರು: ಮುಖ್ಯಮಂತ್ರಿ ಪ್ರಚೋದನಕಾರಿ ಹೇಳಿಕೆ ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಒತ್ತಾಯ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂವಿಧಾನಾತ್ಮಕವಾಗಿ ತೆಗೆದುಕೊಂಡಿರುವ ಪ್ರಮಾಣವಚನದ ವಿರುದ್ಧ ನೀಡಿರುವ ತಮ್ಮ ಪ್ರಚೋದನಕಾರಿ ಹೇಳಿಕೆಯನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದರು.
ದಿನಾಂಕ 13-10-2021 ರಂದು ಮಂಗಳೂರಿನಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಕಾನೂನು ಪಾಲನೆ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡುವುದು ಸರ್ಕಾರದ ಕರ್ತವ್ಯ. ಯುವಕರು ಕೂಡ ಸಾಮಾಜಿಕವಾಗಿ ದಕ್ಕೆ ಆಗದಂತೆ ನೋಡಿಕೊಳ್ಳಬೇಕು . ಸಮಾಜದಲ್ಲಿ ಮೊರಾಲಿಟಿ ಅನ್ನೋದು ಬೇಕಲ್ವಾ ,ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕೋಕೆ ಆಗುತ್ತಾ?ಇವತ್ತು ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ .ನಮ್ಮೆಲ್ಲರ ಸಂಬಂಧಗಳು ಮತ್ತು ಶಾಂತಿ-ಸುವ್ಯವಸ್ಥೆ ನಿಂತಿರುವುದು ನಮ್ಮ ನೈತಿಕತೆಯ ಮೇಲೆ. ಇದು ಇಲ್ಲದಾಗ ಆಕ್ಷನ್ ರಿಯಾಕ್ಷನ್ ಆಗುತ್ತದೆ ಇದು ಸಹಜ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದೀರಿ. ನಿಮ್ಮ ಈ ಹೇಳಿಕೆಯಿಂದ ಹಿಂದುತ್ವದ ಸಂಘಟನೆಗಳು ಮತೀಯ ಗೂಂಡಾಗಿರಿಯಿಂದ ರಾಜ್ಯದಲ್ಲಿ ಕೋಮು ಸೌಹಾರ್ದತೆಯ ಹದಗೆಟ್ಟಿದೆ. ನೀವು ಕರ್ನಾಟಕದ ಮುಖ್ಯಮಂತ್ರಿಯಾಗುವ ಸಮಯದಲ್ಲಿ ತೆಗೆದುಕೊಂಡಿದ್ದ ಪ್ರಮಾಣವಚನವನ್ನು ಉಲ್ಲಂಘಿಸಿ ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ವಿಫಲರಾಗಿದ್ದೀರಿ.
ಆದ್ದರಿಂದ ತಾವು ಹೇಳಿದ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು, ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು.ರಾಜ್ಯ ಸರ್ಕಾರವು ಸಂವಿಧಾನವನ್ನು ಎತ್ತಿ ಹಿಡಿಯಲಾಗುತ್ತದೆ ಹಾಗೂ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಮತ್ತು ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳನ್ನು ಶಿಕ್ಷಿಸಲು ಕ್ರಮಕೈಗೊಳ್ಳಲಾಗುವುದೆಂದು ಖಚಿತಪಡಿಸಬೇಕು.ತೆಹಸೀನ್ ಪೂನವಲ್ಲಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ,ಗುಂಪು ಹಿಂಸಾಚಾರವನ್ನು ತಡೆಗಟ್ಟಲು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ರಚಿಸುವುದನ್ನು ಖಚಿತಪಡಿಸಿ ಮತ್ತು ಸಿಆರ್ ಪಿಸಿ ಕಲಂ 357ಎ ಅಡಿಯಲ್ಲಿ ಸಂತ್ರಸ್ತರಿಗೆ ಪರಿಹಾರವನ್ನು ನೀಡಬೇಕು.ಶಕ್ತಿ ವಾಹಿನಿ ವಿರುದ್ಧ ಯೂನಿಯನ್ ಆಪ್ ಇಂಡಿಯಾ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು. ಅಂತರ್ಜಾತಿ ಮತ್ತು ಅಂತರ್ ಧರ್ಮ ವಿವಾಹಗಳನ್ನು ರಕ್ಷಿಸಲು ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು.ವಿವಾಹಿತ ವ್ಯಕ್ತಿಗಳ ವಿರುದ್ಧ ನಡೆಯುವ ಹಿಂಸೆ, ಮರ್ಯಾದ ಹತ್ಯೆ ಮತ್ತು ನೈತಿಕ ಪೊಲೀಸಗಿರಿ ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮಗಳನ್ನು ಪ್ರಚಾರ ಮಾಡಬೇಕು ಎಂದು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ನಾಗರಾಜ್ ಪೂಜಾರ್, ಎಸ್ ದೇವೇಂದ್ರಗೌಡ, ಡಿಎಚ್ ಕಂಬಳಿ, ಶ್ರೀನಿವಾಸ್ ಬುಕನಟ್ಟಿ, ಚಂದ್ರಶೇಖರ್ ಗೋರೆಬಾಳ, ಶೇಕ್ಷಾಖಾದ್ರಿ, ನಾಗರಾಜು ಸಾಸಲಮರಿ, ಸಂಗಮೇಶ್ ಸಿಂಧನೂರು, ಬಸವರಾಜ್ ಬೆಳಗುರ್ಕಿ, ವಿಜಯ್ ಕುಮಾರ್, ಮಂಜುನಾಥ್ ಗಾಂಧಿನಗರ, ಬಿ.ಎಸ್.ಯರದಿಹಾಳ,ನಾಗರಾಜ ತುರ್ವಿಹಾಳ, ವಸೀಮ್ ಅಹ್ಮದ್, ನೂರ ಮಹ್ಮದ್, ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
