;

ಸಿಂಧನೂರು : ನಗರದ ಚೆನ್ನಮ್ಮ ವ್ರತ್ತದಲ್ಲಿ ವೀರ ರಾಣಿ ಕಿತ್ತೂರ ಚೆನ್ನಮ್ಮ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಯಂತಿಯನ್ನು ಆಚರಣೆ ಮಾಡಲಾಯಿತು…!!!

ಸಿಂಧನೂರು : ನಗರದ ಚೆನ್ನಮ್ಮ ವ್ರತ್ತದಲ್ಲಿ ವೀರ ರಾಣಿ ಕಿತ್ತೂರ ಚೆನ್ನಮ್ಮ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಯಂತಿಯನ್ನು ಕೊವಿಡ್ ನಿಯಮಗಳನ್ನು ಪಾಲಿಸುವುದುಕ್ಕಾಗಿ ಸರಳವಾಗಿ ಆಚರಣೆ ಮಾಡಲಾಯಿತು.

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಹೋರಾಡಿದ ದಿಟ್ಟ ಮಹಿಳೆ ಕಿತ್ತೂರಿನ ರಾಣಿ ಚೆನ್ನಮ್ಮಾಜಿಯರು. ತಮ್ಮ ಅಸಾಧಾರಣ ಧೈರ್ಯ ಸಾಹಸಗಳಿಂದ ಅಜರಾಮರರಾಗಿದ್ದಾರೆ. ಇವತ್ತು, ಅಕ್ಟೋಬರ್ ೨೩ ನೇ ತಾರೀಕು, ಅವರ ೨೪೨ನೇ ಜನುಮದಿನ. ಅವರ ಜೀವನದ ಬಗ್ಗೆ, ಬ್ರಿಟಿಷರ ಕುತಂತ್ರವನ್ನೆದುರಿಸಿ ಅವರ ವಿರುದ್ಧ ಹೋರಾಡಿ ಯುದ್ಧ ಗೆದ್ದ ಅವರ ಪರಾಕ್ರಮದ ಬಗ್ಗೆ ಇವತ್ತಿಗೂ ನಮ್ಮ ನಾಡಿನ ಜನ ಅವರನ್ನು ಸ್ಮರಿಸುತ್ತಿದ್ದಾರೆ ಎಂದು ನಗರದ ಕಿತ್ತೂರ ರಾಣಿ ಚೆನ್ನಮ್ಮವ್ರತ್ತದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಕೆ.ವಿರೂಪಾಕ್ಷಪ್ಪನವರು ಮಾತನಾಡಿದರು.

ಈ ಸಂದರ್ಭದಲ್ಲಿ ಪಂಪನಗೌಡ ಬಾದರ್ಲಿ ಕಾಂಗ್ರೆಸ್ ಮುಖಂಡರು, ಅಮರೇಗೌಡ ವಿರುಪಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು,ಚಂದ್ರಭೂಪಾಲ್ ನಾಡಗೌಡ ಜೆಡಿಎಸ್ ಯುವ ಮುಖಂಡರು, ಬಸವರಾಜ್ ಹಿರೇಗೌಡ ,ಶಿವನಗೌಡ ಗೊರೆಬಾಳ, ನಿರುಪಾದೆಪ್ಪ ವಕೀಲರು ,ಎಂ ದೊಡ್ಡ ಬಸವರಾಜ್, ಪಂಚಮಸಾಲಿ ಸಮಾಜದ ಅಧ್ಯಕ್ಷರ ಮಲ್ಲಿಕಾರ್ಜುನ್, ಕಾರ್ಯಧ್ಯಕ್ಷ ಸಿದ್ದರಾಮೇಶ,ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ್ ಭೋಗವತಿ,ಇನ್ನೂ ಅನೇಕ ವಿವಿಧ ಪಕ್ಷದ ಮುಖಂಡರು, ಅಧಿಕಾರಿಗಳು, ಪಂಚಮಸಾಲಿ ಸಮಾಜದ ಎಲ್ಲಾ ಮುಖಂಡರು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend