;

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ!!!!?

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ!!!!?

ಶಿವಮೊಗ್ಗ: ಶಿಕ್ಷಕರ ಕೊರತೆ ನೀಗಿಸಲು ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಹೊಸನಗರದಲ್ಲಿ ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಚಾರವನ್ನು ತಿಳಿಸಿದ ಸಚಿವರು, ವಿಜ್ಞಾನ ಮತ್ತು ಗಣಿತ ಶಿಕ್ಷಕರ ನೇಮಕಾತಿಯಲ್ಲಿ ಕೊಂಚ ತಾಂತ್ರಿಕ ತೊಡಕು ಇದೆ. ಇದನ್ನು ಸರಿಪಡಿಸಿಕೊಂಡು ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು. ಈ ಶಾಲೆಗೆ ಸಣ್ಣಪುಟ್ಟ ಶಾಲೆಗಳನ್ನು ವಿಲೀನ ಮಾಡುವ ಚಿಂತನೆ ಇದೆ. ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು. ಇದಕ್ಕಾಗಿ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಅವರು ಹೇಳಿದರು…

ವರದಿ. ಮಂಜುನಾಥ್, ಎನ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;