ಮಾನ್ಯ ಶ್ರೀ ಜೆ.ಎನ್.ಗಣೇಶ್ ಶಾಸಕರು ಕಂಪ್ಲಿ ವಿಧಾನಸಭಾ ಕ್ಷೇತ್ರ
ಕಂಪ್ಲಿಯಲ್ಲಿ “wow snacks” ಸೆಂಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾನ್ಯ ಶಾಸಕರು
2018_19ಸ್ವಯಂ ಸಾಲಿನ ಸ್ವಯಂ ಉದ್ಯೋಗ ಮಾಡಲು ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಗ್ರಾಮೀಣ/ನಗರ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮಶೀಲರನ್ನಾಗಿಸಲು “ಸಮೃದ್ಧಿ ಯೋಜನೆ”ಸದರಿ ಯೋಜನೆಯಡಿ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು.ಸದರಿ ಯೋಜನೆಯಡಿ ವಿವಿಧ ಉದ್ದೇಶಗಳಡಿ ಯೋಜನೆಗಳನ್ನು ರೂಪಿಸಲಾಗಿದೆ.ಉತ್ತಮ ಮಾರುಕಟ್ಟೆ ಹೊಂದಿರುವ ಸರ್ಕಾರಿ ಮತ್ತು ಖಾಸಗಿ ಬ್ರಾಂಡೆಡ್ ಸಂಸ್ಥೆಗಳ ಸಹಯೋಗದಲ್ಲಿ ಫ್ರಾಂಚೈಸಿ/ಡೀಲರ್ ಶಿಪ್ ವ್ಯವಸ್ಥೆಯೊಂದಿಗೆ ರಿಟೈಲ್ ವ್ಯಾಪಾರಿ ಮಳಿಗೆಗಳನ್ನು ಆರಂಭಿಸಲು ಅಗತ್ಯವಾದ ತಾಂತ್ರಿಕ ಬೆಂಬಲ ಹಾಗೂ ಆರ್ಥಿಕ ಬೆಂಬಲ ನೀಡಿ ಯಶ್ವಸಿ ಉದ್ದಿಮೆದಾರರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ ಈಗ ಜನ ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾನ್ಯ ಶಾಸಕರು ಹೇಳಿದರು ಸ್ಥಳದಲ್ಲಿ ಇಲಾಖೆ ಅಧಿಕಾರಿಗಳು ಪುರಸಭೆ ಸದಸ್ಯರು ಮುಖಂಡರುಗಳು ಉಪಸ್ಥಿತರಿದ್ದರು…

ವರದಿ. ಮಸ್ತಾನ್, ಕಂಪ್ಲಿ ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
