ಮೊಳಕಾಲ್ಮೂರು: “ಕನ್ನಡಕ್ಕಾಗಿ ನಾವು ಅಭಿಯಾನ” ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಗೀತ ಗಾಯನ ಕಾರ್ಯಕ್ರಮ.!

ಮೊಳಕಾಲ್ಮೂರು: “ಕನ್ನಡಕ್ಕಾಗಿ ನಾವು ಅಭಿಯಾನ” ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಗೀತ ಗಾಯನ ಕಾರ್ಯಕ್ರಮ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ (ಅಕ್ಟೋಬರ್. 28) : ಕನ್ನಡ ರಾಜ್ಯೋತ್ಸವದ ನಿಮಿತ್ತ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ಪೊಲೀಸ್ ಠಾಣೆಯ ಆವರಣದ ಮುಂದೆ, ವಿದ್ಯಾರ್ಥಿಗಳು, ಸಾರ್ವಜನಿಕರಿಂದ ಸಾಮೂಹಿಕವಾಗಿ ಕನ್ನಡ ಗೀತೆಗಳ ಗಾಯನ ಮಾಡಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ “ಕನ್ನಡಕ್ಕಾಗಿ ನಾವು ಅಭಿಯಾನ” ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮವು ಸಾಮೂಹಿಕ ಗೀತ ಗಾಯನ ನಡೆಯಿತು. ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆಯೂ ಸೇರಿದಂತೆ ಕನ್ನಡ ನಾಡು-ನುಡಿ, ಸಂಸ್ಕøತಿಯ ವೈಭವ, ಕನ್ನಡದ ಶ್ರೇಷ್ಠತೆ ಸಾರುವಂತಹ ಡಾ.ಕುವೆಂಪುರವರ “ಬಾರಿಸು ಕನ್ನಡ ಡಿಂಡಿಮವ, ಡಾ.ಕೆ.ಎಸ್.ನಿಸಾರ್ ಅಹಮದ್ ಅವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ಮೂರು ಹಾಡುಗಳನ್ನು ಗಾಯನ ಮಾಡಿದ ನಂತರ ಚಿತ್ರದುರ್ಗ ಜಿಲ್ಲೆಯ ಶ್ರೇಷ್ಠತೆಯನ್ನು ಸಾರುವ ನಾಗರಹಾವು ಚಲನಚಿತ್ರದ ಗೀತೆ “ಕನ್ನಡ ನಾಡಿನ ವೀರರಮಣಿಯ” ಗೀತೆಯನ್ನು ಹಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪಿ.ಎಸ್.ಐ ಬಸವರಾಜ್, ಎ.ಎಸ್.ಐ ಜಯಪ್ಪ, ಹಾಗೂ ಪೇದೆಗಳಾದ ನರೇಶ್, ಶ್ರೀಧರ್, ಪ್ರಭು, ಶಶಿ, ಅರುಣ್, ಶಿವನಂದ ಸೇರಿದಂತೆ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಆಟೋ ಚಾಲಕರು, ಸಾರ್ವಜನಿಕರು ಭಾಗವಹಿಸಿದ್ದರು…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend