ಮುದುಡಿದ ಬೆಟ್ಟದ ಹೂವು,ಕನ್ನಡನಾಡಿನ ಪುನೀತ್ ರಾಜುಕುಮಾರ್ ಇನ್ನು ನೆನಪು ಮಾತ್ರ…!!”

ಕನ್ನಡದ ಸಿನಿಮಾ ಇಂಡಸ್ಟ್ರಿಯ ಖ್ಯಾತ ನಟ ಪುನೀತ್ ರಾಜ್‌ಕುಮಾರ್‌ ಅವರು ಆರೋಗ್ಯ ಸಮಸ್ಯೆಯಿಂದ ಕೊನೆಯುಸಿರೆಳೆದ್ದಿದ್ದಾರೆ. ಪುನೀತ್‌ ಅವರು ತಮ್ಮ 46ನೇ ವಯಸ್ಸಿಗೇ ತಮ್ಮ ಅಭಿಮಾನಿಗಳನ್ನು ಅಗಲಿದ್ದಾರೆ.

ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ, ಕುಸಿದು ಬಿದ್ದ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅಭಿಮಾನಿಗಳಿಗೆ ಅವರ ಪಾರ್ತೀವ ಶರೀರ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅವಕಾಶ ಮಾಡಿಕೊಡಲಾಗಿದೆ.

ಬೆಳಗ್ಗೆ ಆಸ್ಪತ್ರೆಗೆ ದಾಖಲಾದ ವೇಳೆ, ಲಘು ಹೃದಯಾಘಾತವಾಗಿದೆ ಎಂದು ಹೇಳಲಾಗಿತ್ತು. ನಟ ಶಿವರಾಜ್‌ ಕುಮಾರ್, ರಾಕ್‌ ಲೈನ್ ವೆಂಕಟೇಶ್, ನಟ ರವಿಚಂದ್ರನ್, ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾವಿಸಿದ್ದರು. ಈ ವೇಳೆಗೆ, ಅವರು ಕೊನೆಯುಸಿರೆಳೆದಿದ್ದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರೂ ಆಗಿದ್ದ ಪುನೀತ್‌ ರಾಜ್‌ಕುಮಾರ್, ಅಪ್ಪು, ವೀರ ಕನ್ನಡಿಗ, ರಾಜಕುಮಾರ, ನಟಸಾರ್ವಭೌಮ, ದೊಡ್ಮನೆಹುಡ್ಗ, ಪೃಥ್ವಿ ಸೇರಿದಂತೆ 26 ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದಾರೆ. ಅಲ್ಲದೆ, ಡಾ. ರಾಜ್‌ಕುಮಾರ್ ಅವರ ಜೊತೆಗೂ ಹಲವು ಸಿನಿಮಾಗಳಲ್ಲಿ ಬಾಲ ನಟರಾಗಿ 10 ಸಿನಿಮಾಗಳಲ್ಲಿ ನಟಿಸಿದ್ದಾರೆ…

ವರದಿ. ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend