ನಾಡು ಕಂಡ ಶ್ರೇಷ್ಠ ನಟನಿಗೆ ಅಂತಿಮ ವಿದಾಯ…!!!

ನಾಡು ಕಂಡ ಶ್ರೇಷ್ಠ ನಟ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿ ಹೊಸಹಳ್ಳಿ ವೀರ ಮದಕರಿ ನಾಯಕ ವೃತ್ತದಲ್ಲಿ ರಾತ್ರಿ ನಟ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಮೇಣದಬತ್ತಿ ಹಚ್ಚಿ ಜ್ಯೋತಿ ಬೆಳಗುವುದರ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಪ್ರಖ್ಯಾತ ನಟರಾದ ಡಾಕ್ಟರ್ ರಾಜಕುಮಾರ್ ಅವರ ಪುತ್ರ ಅಪ್ಪು ಎಂದೇ ಖ್ಯಾತಿ ಪಡೆದಿದ್ದರು. ಅವರು ಕನ್ನಡದ ಕಣ್ಮಣಿ ಎನಿಸಿದ್ದರು. ಬಾಲ್ಯದಲ್ಲಿ ಚಿತ್ರರಂಗ ಪ್ರವೇಶಿಸಿದ್ದ ಅವರ ಅವರ ನಿಧನ ನಿಜಕ್ಕೂ ಆಘಾತಕಾರಿ ಸುದ್ದಿ ನಾಡಿನ ಸಮಸ್ತ ಕನ್ನಡಿಗರಿಗೆ ಈ ವಿಷಯ ಆಘಾತವನ್ನು ತಂದಿದೆ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಹೊಸಹಳ್ಳಿಯಲ್ಲಿ ಮದಕರಿ ವೃತ್ತದಲ್ಲಿ ನೂರಾರು ಅಭಿಮಾನಿಗಳು ಅವರ ಭಾವಚಿತ್ರಕ್ಕೆ ಮೇಣದಬತ್ತಿ ಹಚ್ಚಿ ಜ್ಯೋತಿ ಬೆಳಗುವುದರ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಹೊಸಹಳ್ಳಿಯ ಪುನೀತ್ ರಾಜಕುಮಾರ್ ಅಭಿಮಾನಿಗಳು ಜನಪ್ರತಿನಿಗಳು ಗ್ರಾಮಸ್ಥರು ಯುವಕರು ಸೇರಿ ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ. ವಿರೇಶ್. ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend