ಬಹು ನೀರಕ್ಷೆಯಿಂದ ಕಾದಿದ್ದ ದೀಪಾವಳಿ ಹಬ್ಬದ ಕೊಡುಗೆ ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಜನರ ಜೇಬಿಗೆ ಕತ್ತರಿ!!!!!!!!!!!!
ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ನಾಗಲೋಟ ಇನ್ನೂ ನಿಂತಿಲ್ಲ. ಸೋಮವಾರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಜನ ಸಾಮಾನ್ಯರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 109.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.50 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ದಾಖಲಾಗಿದೆ.
ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110.15 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.35 ರೂಪಾಯಿ ಇದೆ. ಹಾಗೆಯೇ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ನಿಗದಿಯಾಗಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.56 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 114.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ಇದೆ…

ವರದಿ.ಪ್ರತಾಪ್. ಸಿ. ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
