ಸಿಂಧನೂರು :-66ನೇ ಕನ್ನಡ ರಾಜ್ಯೋತ್ಸವನ್ನು ಸರಳವಾಗಿ ಆಚರಣೆ ಮಾಡಲಾಯಿತು…!!!

ಸಿಂಧನೂರು : ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ದಿನವನ್ನು ಕರ್ನಾಟಕ ರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಮೈಸೂರು ಪ್ರಾಂತ್ಯ ಎಂಬ ಹೆಸರಿನ ಮೂಲಕ ಕರೆಯಲ್ಪಡುತ್ತಿದ್ದ ಹಾಗೂ ವಿಭಾಗಗಳಾಗಿ ಚದುರಿದ್ದ ನಾಡನ್ನು 1956ರ ನವೆಂಬರ್ 1ರಂದು “ಕರ್ನಾಟಕ” ಎಂದು ಮರುನಾಮಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1ರಂದು ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷ ನಾವು 66ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೇವೆ. ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 1ರಂದು ರಾಜ್ಯಗಳನ್ನು ವಿಂಗಡಿಸಿದರು. ಅದರಂತೆ ಮದ್ರಾಸ್, ಮುಂಬಯಿ ಮತ್ತು ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳೆಲ್ಲವೂ ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ ಮೈಸೂರು ರಾಜ್ಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಯಿತು.ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಅಚರಿಸುತ್ತೇವೆ.ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ.ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ಭಾಷೆಯ ಜನರಿಗೆ ಆಶ್ರಯ ನೀಡಿದ್ದೇವೆ. ಕನ್ನಡಿಗರು ಕನ್ನಡವನ್ನ ಮಾತ್ರಭಾಷೆಯನ್ನಾಗಿ ಮಾಡಿಕೊಳ್ಳಬೇಕು. ಅನ್ಯಭಾಷಿಕರಿಗೆ ನಮ್ಮ ಕನ್ನಡ ಭಾಷೆಯನ್ನು ಕಲಿಸಬೇಕು. ಎಂದು ದ್ವಜಾ ವಂದನ ಸ್ವೀಕರಿಸಿದ ನಂತರ ಶಾಸಕರಾದ ವೆಂಕಟರಾವ್ ನಾಡಗೌಡ ಮಾತನಾಡಿದರು.

ತಾಲೂಕು ಆಡಳಿತ ವತಿಯಿಂದ ಮಿನಿ ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪೋಟೊಗೆ ಪುಷ್ಪನಮನ ಸಲ್ಲಿಸಿ, ನಾಡಗೀತೆ ಹಾಡುವುದರ ಮೂಲಕ ತಾಲೂಕು ದಂಡಾದಿಕಾರಿಗಳಾದ ಮಂಜುನಾಥ ಭೋಗಾವತಿ ರವರು ದ್ವಜಾರೋಹಣ ನೇರವೆರಿಸಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಹತ್ತನೆಯ ಮತ್ತು ಹನ್ನೆರಡನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ನಾಡು ನುಡಿ,ನೆಲಜಲ, ರಕ್ಷಣೆಗಾಗಿ ಹೋರಾಟ ಮಾಡಿ ಬದುಕು ಕಟ್ಟಿಕೊಳ್ಳುವುದು ಅನಿವಾರ್ಯ ಎಂದು ತಹಶೀಲ್ದಾರ್ ಮಂಜುನಾಥ ಭೋಗಾವತಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರು ಅಮರೇಗೌಡ ವಿರುಪಾಪುರು, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ದೊಡ್ಡ ಬಸವರಾಜ,ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಮುರ್ತುಜಾ ಹುಸೇನ್,ತಾ.ಪಂ. ಪವನಕುಮಾರ್,ಚಂದ್ರಶೇಖರ್ ಹಿರೇಮಠ್,ಡಿ. ವಾಯ್.ಎಸ್.ಪಿ.ವೆಂಕಟಪ್ಪ ನಾಯಕ,ಧರ್ಮನಗೌಡಮಲ್ಕಾಪೂರು,ಕನ್ನಡ ಪರ ಹೋರಾಟಗಾರರಾದ ಗಂಗಣ್ಣ ಡಿಸ್, ಉಮೇಶ್ ಅರಳಹಳ್ಳಿ, ಲಕ್ಷ್ಮಣ ಭೋವಿ, ಬಸವರಾಜ್ ಬಡಿಗೇರ್, ಮೌನೇಶ್ ದೊರೆ, ರಬ್ಬಾನಿ ಜಾಗಿರ್ದಾರ್, ಸುರೇಶ್ ಇನ್ನೂ ಅನೇಕ ಕನ್ನಡಪರ ಹೋರಾಟಗಾರರು ಭಾಗವಹಿಸಿದ್ದರು….

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend