ಬೆಲೆ ಏರಿಕೆ ಸಂದರ್ಭದಲ್ಲಿಯೂ ಬಿಜೆಪಿಗೆ 30 ಸಾವಿರ ಮುನ್ನಡೆ ಹೇಗೆ ಬಂತು? | ಜಿ.ಪರಮೇಶ್ವರ್ ಪ್ರಶ್ನೆ!!!!!!!
ತುಮಕೂರು: ಬೆಲೆ ಏರಿಕೆಯಾದಂತಹ ಸಂದರ್ಭದಲ್ಲಿಯೂ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಗೆ 30 ಸಾವಿರ ಮುನ್ನಡೆ ಸಿಕ್ಕಿರುವುದು ಆಶ್ಚರ್ಯವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿಂದಗಿ ಹಾಗೂ ಹಾನಗಲ್ ಚುನಾವಣಾ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಂದಗಿಯಲ್ಲಿ ನಮ್ಮ ಪಕ್ಷಕ್ಕೆ ಅಷ್ಟೊಂದು ಮತಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಅದಕ್ಕೆ ಕಾರಣ ಏನು ಎನ್ನುವುದನ್ನು ಪರಿಶೀಲನೆ ಮಾಡುತ್ತೇವೆ ಎಂದು ಅವರು ಹೇಳಿದರು.
ಇನ್ನೂ ಹಾನಗಲ್ ಕ್ಷೇತ್ರ ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆಯಾದರೂ ಅಲ್ಲಿ ನಾವು ಗೆದ್ದಿರುವುದು ಸಂತಸ ತಂದಿದೆ ಎಂದು ಜಿ.ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
