;

ಸಿದ್ದರಾಮಯ್ಯ ಅವರು ಬಿಜೆಪಿ ದಲಿತ ನಾಯಕರ ಮುಂದೆ ಇಟ್ಟಿರುವ ಸವಾಲುಗಳು…!!!

ಸಿದ್ದರಾಮಯ್ಯ ಅವರು ಬಿಜೆಪಿ ದಲಿತ ನಾಯಕರ ಮುಂದೆ ಇಟ್ಟಿರುವ ಸವಾಲುಗಳು….
1) ಕೇಂದ್ರದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಿಸುತ್ತೇವೆ ಎಂದಾಗ, ದಲಿತರನ್ನು ನಾಯಿಗಳು ಎಂದು ತುಚ್ಛೀಕರಿಸಿದಾಗ ಬಾಯಿ ಮುಚ್ಚಿಕೊಂಡಿದ್ಧ ಬಿಜೆಪಿ ದಲಿತ ನಾಯಕರು, ಈಗ ನನ್ನ ವಿರುದ್ಧ ಕೂಗು ಹಾಕುತ್ತಿರುವುದು ರಾಜಕೀಯ ಸ್ವಾರ್ಥಕ್ಕಾಗಿ ಯಲ್ಲದೇ ಮತ್ತೇನು?

2) ನನ್ನನ್ನು ದಲಿತ ವಿರೋಧಿ ಎಂದು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ನನ್ನದೊಂದು ಸಣ್ಣ ಸವಾಲು, ರಾಜ್ಯ ಬಜೆಟನ ಶೇಕಡಾ 24.1ರಸ್ತು ಭಾಗವನ್ನು ಮೀಸಲಿಡುವ ಎಸ್ ಸಿ ಎಸ್ ಪಿ/ಟಿಎಸ್ ಕಾಯ್ದೆಯನ್ನು ನಾನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ಅದನ್ನು ಜಾರಿಗೆ ತರುವಂತೆ ಮಾಡಿ ನೋಡೋಣ.

3)2008-09 ರಿಂದ 2012-13ನೇ ಸಾಲಿನವರೆಗೆ ಬಿಜೆಪಿ ಸರ್ಕಾರ SCSP/TSP ಯೋಜನೆಯಡಿ ಖರ್ಚು ಮಾಡಿದ್ದು ಕೇವಲ ರೂ.22.261 ಕೋಟಿ. ನಮ್ಮ ಸರ್ಕಾರದ ಅವಧಿಯಲ್ಲಿ 88,395 ಕೋಟಿ. ಯಾರು ದಲಿತ ವಿರೋಧಿ? ನಾನಾ? ಬಿಜೆಪಿ ನಾಯಕರಾ?

4) ಪರಿಶಿಷ್ಟ ಜಾತಿ/ ಪಂಗಡ ಸರ್ಕಾರಿ ನೌಕರರ ಮುಂಬಡ್ತಿ ಸೌಲಭ್ಯವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದಾಗ ಬಿಜೆಪಿಯ ದಲಿತ ನಾಯಕರು ಕಣ್ಣು ಮುಚ್ಚಿ ಕೂತಿದ್ದರು. ಸುಗ್ರೀವಾಜ್ಞೆ ಮೂಲಕ ಆ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಿದ್ದು ನಮ್ಮ ಸರ್ಕಾರ ಎನ್ನುವುದನ್ನು ಮರೆಯಬೇಡಿ.

5) ಪರಿಶಿಷ್ಟ ಜಾತಿ/ಪಂಗಡದ ಗುತ್ತಿಗೆದಾರರಿಗೆ 1ಕೋಟಿ ರೂಪಾಯಿವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಶೇಕಡ18 ರಷ್ಟು ಮೀಸಲಾತಿ ನೀಡಿ ಕೆಟಿಟಿಪಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ನಮ್ಮ ಸರ್ಕಾರ. ನರೇಂದ್ರ ಮೋದಿಯವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ದಲಿತರಿಗೆ ಅನುಕೂಲ ಮಾಡಿಕೊಡಿ.

6) ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ/ ಪಂಗಡಗಳ ಆಶ್ರಮಶಾಲೆ, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಹಾರಕ್ಕಾಗಿ ಮಾಸಿಕವಾಗಿ ನೀಡುತ್ತಿದ್ದ ಹಣ ರೂ.600,750 ಮತ್ತು 850. ಅದನ್ನು ಕ್ರಮವಾಗಿ ರೂ.1300,1500 ಮತ್ತು 1600ಕ್ಕೆ ಹೆಚ್ಚಿಸಿದ್ದು ನಮ್ಮ ಸರ್ಕಾರ

7) ನಮ್ಮ ಸರ್ಕಾರ ಹೋಬಳಿಗೊಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಸತಿ ಶಾಲೆಯಂತೆ 270 ಹೊಸ ವಸತಿ ಶಾಲೆ ಹಾಗೂ 200 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಿತ್ತು. ಇದರಿಂದ 74,300 ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಪ್ರವೇಶಾವಕಾಶ ಸಿಕ್ಕಿದೆ. ಬಿಜೆಪಿ ಸರ್ಕಾರದ ಸಾಧನೆ ಏನು?

8) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉದ್ಯಮಿಗಳಿಗೆ KSFC ಮೂಲಕ ಶೇಕಡಾ 4ರ ಬಡ್ಡಿಯಲ್ಲಿ ರೂ. 10 ಕೋಟಿವರೆಗೆ ಸಾಲ‌. ಈ ಸೌಲಭ್ಯ ರಾಷ್ಟ್ರೀಕೃತ ಬ್ಯಾಂಕುಗಳಿಗೂ ವಿಸ್ತರಣೆ. ಈ ಮೂಲಕ 1,597 ಉದ್ಯಮಿಗಳಿಗೆ 908 ಕೋಟಿ ರೂ. ಸಾಲ. ಇದು ನಮ್ಮ ಸಾಧನೆ. ಬಿಜೆಪಿ ಸರ್ಕಾರದ ಸಾಧನೆ ಏನು?

9) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ/ಅತಿಸೂಕ್ಷ್ಮ 72 ಸಮುದಾಯಗಳನ್ನು ಗುರುತಿಸಿ ರೂ.. 222 ಕೋಟಿ ವೆಚ್ಚದಲ್ಲಿ ಅವರ ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದು ನಮ್ಮ ಸರ್ಕಾರ.

10) ನಮ್ಮ ಸರ್ಕಾರ 840 ಕೋಟಿ ವೆಚ್ಚದಲ್ಲಿ ಡಾll ಬಿ.ಆರ್ ಅಂಬೇಡ್ಕರ್, ಬಾಬು ಜಗಜೀವನ್ ರಾಂ, ಮತ್ತು ಮಹರ್ಷಿ ವಾಲ್ಮೀಕಿ ಯವರ ಹೆಸರಿನಲ್ಲಿ 8,199 ಭವನಗಳನ್ನು ನಿರ್ಮಿಸಿತ್ತು. ನನ್ನನ್ನು ದಲಿತ ವಿರೋಧಿ ಎಂದು ಹೇಳುವವರು ಬಿಜೆಪಿ ಕಾಲದಲ್ಲಿ ಕಟ್ಟಿದಷ್ಟು ಎಂದು ಲೆಕ್ಕ ಹೇಳಿರಿ.

11) ನಮ್ಮ ಸರ್ಕಾರ ರೂ. 494 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಲಯಗಳ ಸ್ವಂತ ಕಟ್ಟಡ, ರೂ. 537 ಕೋಟಿ ವೆಚ್ಚದಲ್ಲಿ 129 ವಸತಿ ಶಾಲಾ ಸಂಕೀರ್ಣ ನಿರ್ಮಾಣ. 16 ವಿಶ್ವವಿದ್ಯಾಲಯಗಳಲ್ಲಿ 11 6 ಕೋಟಿ ವೆಚ್ಚದಲ್ಲಿ ಸ್ನಾತಕೋತ್ತರ ವಸತಿನಿಲಯ ನಿರ್ಮಿಸಿದೆ. ಬಿಜೆಪಿ ಸರ್ಕಾರ ಏನು ಮಾಡಿದೆ?

12) ಎರಡೂವರೆ ಲಕ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಫಲಾನುಭವಿಗಳು ವಿವಿಧ ಅಭಿವೃದ್ಧಿಯಲ್ಲಿ ನಿಗಮದಿಂದ ಪಡೆದಿದ್ದ ರೂ. 581 ಕೋಟಿ ಸಾಲ ಮನ್ನಾ ಮಾಡಿದ್ದು ನಮ್ಮ ಸರ್ಕಾರ. ಬಿಜೆಪಿ ಸರ್ಕಾರ ಈ ಸಮುದಾಯದ ಫಲಾನುಭವಿಗಳ ಎಷ್ಟು ಸಾಲ ಮನ್ನಾ ಮಾಡಿದೆ?…

ವರದಿ. ಎಚ್ಚರಿಕೆ ಪತ್ರಿಕೆ ವರದಿಗಾರ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;