ಮೊಳಕಾಲ್ಮುರು ಕಡಿಮೆ ಮಳೆ ಬೀಳುವ ಪ್ರದೇಶವಾಗಿರುವ ಭಾರಿ ಮಳೆಗೆ ಬೆಳೆ ನಾಶ..!

ಮೊಳಕಾಲ್ಮುರು ಕಡಿಮೆ ಮಳೆ ಬೀಳುವ ಪ್ರದೇಶವಾಗಿರುವ ಭಾರಿ ಮಳೆಗೆ ಬೆಳೆ ನಾಶ..!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಮುಂಗಾರು ಮತ್ತು ಹಿಂಗಾರು ಎರಡೂ ಋತುಗಳು ರೈತರ ಪಾಲಿಗೆ ಮಾರಕವಾಗಿ ಪರಿಣಮಿಸಿವೆ ಎಂದರೆ ತಪ್ಪಾಗಲಾರದು. ಸಾವಿರಾರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿದ್ದ ಬೆಳೆ ಹಾಳಾಗಿದೆ. ಲಕ್ಷಾಂತರ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ತಾಲೂಕಿನ ಇತಿಹಾಸದಲ್ಲೇ ರೈತರು ಅನಾವೃಷ್ಟಿ ಕಂಡದ್ದೆ ಹೆಚ್ಚು ಆದರೆ ಈ ಬಾರಿ ಅತಿವೃಷ್ಟಿಯಿಂದಾಗಿ ವಾರ್ಷಿಕ ವಾಣಿಜ್ಯ ಶೇಂಗಾ ಬೆಲೆಯೂ ಹೊಲದಲ್ಲಿ ಕೊಳೆಯುತ್ತಿದೆ. ಇನ್ನು ಕಟಾವು ಮಾಡದೇ ಇರುವ ಶೇಂಗಾ ಗಿಡದಲ್ಲಿ ಕಾಯಿಗಳು ಮೊಳಕೆಯೊಡೆಯುತ್ತವೆ. ಕಳೆದ ಎಂಟು ಹತ್ತು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ನಿರಂತರ ಮಳೆಯ ಹೊಡೆತಕ್ಕೆ ಅನ್ನದಾತ ಅಕ್ಷರಶ ತತ್ತರಿಸಿ ಹೋಗಿದ್ದಾರೆ. ಬಂದ ಅಲ್ಪಸ್ವಲ್ಪ ಬೆಳೆಯು  ಕೈಗೆ ಸಿಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತನಿಗೆ ಬರಸಿಡಿಲು ಬಡಿದಂತಾಗಿದೆ. ತಾಲೂಕಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಶೇಂಗಾ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ಬೆಳೆಗಾರರ ಬವಣೆ ಹೇಳತೀರದಾಗಿದೆ. ಬಯಲುಸೀಮೆಯ ಬಡವರ ಬಾದಾಮಿ ರೈತನನ್ನು ಸಾಲದ ಸುಳಿಗೆ ಸಿಲುಕಿಸಿದ್ದು ಮಳೆಯು ಇನ್ನಿಲ್ಲದ ಅವಾಂತರ ಸೃಷ್ಟಿ ಮಾಡಿದೆ. ಈ ಬಗ್ಗೆ ಸರ್ಕಾರವು ಬೆಳೆ ಹಾನಿಗೊಳಗಾದ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು ಅಲ್ಲದೇ ಫಸಲ್ ಭೀಮಾ ಯೋಜನೆ ಯಲ್ಲಿ ಅರ್ಹ ಫಲಾನುಭವಿಗಳಿಗೆ ಬೆಳೆವಿಮೆ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend