‘ಇಟ್ಟಿಗಿ ಗ್ರಾಮ ಪಂಚಾಯತಿ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ’
ದಿನಾಂಕ 26/11/2021 ರಂದು ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಇಟ್ಟಿಗಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮತ್ತು ಇಟ್ಟಿಗಿ ಸಾರ್ವಜನಿಕ ಗ್ರಂಥಾಲಯದಲ್ಲಿ ಶಾಲಾ ಮಕ್ಕಳೊಂದಿಗೆ(ಭವಿಷ್ಯದ ಪ್ರಜೆಗಳೊಂದಿಗೆ) ಗುರುವಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಗ್ರಾಮಪಂಚಾಯತಿ ಕ್ಲರ್ಕ್ ಕಂ ಡಿ ಇ ಒ ಪ್ರಕಾಶ್ ರವರ ನೇತೃತ್ವದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿದರು. “ಪ್ರತಿಜ್ಞಾವಿಧಿಯಲ್ಲಿ ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ, ನ್ಯಾಯವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.
ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢ ಸಂಕಲ್ಪ ಮಾಡಬೇಕು. ನಮ್ಮ ಸಂವಿಧಾನ ಸಭೆಯಲ್ಲಿ 1949ನೇ ನವೆಂಬರ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಿಸಲಾಯಿತು.
ಈ ಒಂದು ಸಂವಿಧಾನ ಸಮರ್ಪಣಾ ದಿನಾಚರಣೆಯ ಪೂಜಾ & ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ
ಗ್ರಾಮ ಪಂಚಾಯತಿ ಪಿಡಿಓಗಳಾದ ಉಮೇಶ್ ಜಾಹಗಿರದಾರ್,ಇಟ್ಟಿಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಧಿಕಾರಿಗಳು &ಸಿಬ್ಬಂದಿಗಳು, ಗ್ರಾ. ಪಂ ಬಿಲ್ ಕಲೆಕ್ಟರ್ ಕೊಟ್ರೇಶ,ಕ್ಲರ್ಕ್ ಕಂ ಡಿ ಇ ಒ ಹೆಚ್ ಪ್ರಕಾಶ್ & ಡಿ ಇ ಒ ಮಲ್ಲಿಕಾರ್ಜುನ ಕೆ,ಕಾಯಕಬಂಧು ಶ್ರೀಮತಿ ಹೆಚ್ ಶಾಂತಮ್ಮ, ಗ್ರಂಥಪಾಲಕರಾದ ಕೆ ಎಸ್ ದೇವೇಂದ್ರಪ್ಪ, ಮಹೇಂದ್ರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ-ಪ್ರಕಾಶ್ ಇಟ್ಟಿಗಿ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
