ಹರಪನಹಳ್ಳಿಯ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಕ್ಷೇತ್ರದ ಜನಪ್ರಿಯ ನಾಯಕಿ ಎಂ,ಪಿ,ವೀಣಾಮಹಾಂತೇಶ್!!

ಹರಪನಹಳ್ಳಿಯ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಕ್ಷೇತ್ರದ ಜನಪ್ರಿಯ ನಾಯಕಿ ಎಂ,ಪಿ,ವೀಣಾಮಹಾಂತೇಶ್!!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ-2021ರ‌ ಪ್ರಯುಕ್ತ ಬಳ್ಳಾರಿ-ವಿಜಯನಗರ ಜಿಲ್ಲೆಯಿಂದ ವಿ.ಪ ಚುನಾವಣೆಗೆ ಸ್ಪರ್ಧಿಸಿರುವ ನಮ್ಮೆಲ್ಲರ ಹಿರಿಯ ನಾಯಕ, ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸದಾ ಮಿಡಿಯುವ ಹಿರಿಯ ಜೀವ ಶ್ರೀ,ಕೆ,ಸಿಕೊಂಡಯ್ಯ ಅವರ ಪರವಾಗಿ ಇಂದು ಹರಪನಹಳ್ಳಿಯ ಕಾಂಗ್ರೆಸ್ ಕಛೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಒಬಿಸಿ‌ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಎಂ,ಡಿ,ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.
‌‌‌ಕೊಂಡಯ್ಯ ಪರ ಚುನಾವಣಾ ಪ್ರಚಾರಕ್ಕೆಂದು ಕ್ಷೇತ್ರದಲ್ಲಿ ಬೀಡುಬಿಟ್ಟಿರುವ ಒಬಿಸಿ ಘಟಕದ ರಾಜ್ಯಾಧ್ಯಕ್ಷರು, ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರ ವ್ಯಾಪ್ತಿಯ ಮೂವತ್ತು ಗ್ರಾ.ಪಂಗಳ ಪೈಕಿ ಇಪ್ಪತೈದು ಗ್ರಾ.ಪಂ ಗಳ ಸದಸ್ಯರನ್ನು ಈಗಾಗಲೇ ಭೇಟಿಯಾಗಿ, ಕಾರ್ಯಕರ್ತರ ಸಭೆ ನಡೆಸಿ ಬಿರುಸಿನ ಪ್ರಚಾರ ಕೈಗೊಂಡಿರುವ ವಿಚಾರವನ್ನು ಪತ್ರಿಕೆಗಳ ಮೂಲಕ ಮಾಹಿತಿ ನೀಡಿದರು.
ಕ್ಷೇತ್ರ ಪ್ರವಾಸದ ಸಂದರ್ಭದಲ್ಲಿ ಕಾರ್ಯಕರ್ತರಿಂದ ಹಾಗೂ ಗ್ರಾ.ಪಂ ಸದಸ್ಯರುಗಳಿಂದ ಉತ್ತಮ ಪ್ರತಿಕ್ರಿಯೆ ಬಂದಿದ್ದು‌, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆಡಳಿತ ನಡೆಯಿಂದ ರೋಸಿ ಹೋದವರಂತೆ ಕಂಡು ಬಂದ ಸದಸ್ಯರು, ಗ್ರಾ.ಪಂ ಗಳಿಗೆ ಆಶ್ರಯ ಯೋಜನೆಯ ಒಂದು ಮನೆಗಳಿಲ್ಲ. ಉದ್ಯೋಗ ಖಾತರಿ ಯೋಜನೆಗಳಿಂದ ಗ್ರಾಮಾಭಿವೃದ್ಧಿಗಾಗಿ ಕನಸು ಕಂಡಿದ್ದ ನಮಗೆ ಅನುದಾನದ ಕೊರತೆ ಗ್ರಾಮಗಳಲ್ಲಿ ಮುಖ ತೋರಿಸದ ಪರಿಸ್ಥಿತಿ ಉದ್ಭವವಾಗಿದೆ. ಎಂದಿನಂತೆ ಗ್ರಾ.ಪಂ ಗಳು ಅಭಿವೃದ್ಧಿ ಹೊಂದಬೇಕಾದರೆ ಕಾಂಗ್ರೆಸ್ ಪಕ್ಷವೇ ಸೂಕ್ತ ಎನ್ನುವ ಅಭಿಪ್ರಾಯವನ್ನು ಸದಸ್ಯರು ವ್ಯಕ್ತಪಡಿಸಿದ್ದು ಅಭ್ಯರ್ಥಿ ಕೊಂಡಯ್ಯನವರು ಗೆಲ್ಲುವುದು ಶತಸಿದ್ಧ ಎಂದು ಹರ್ಷ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಎಂ,ಪಿ,ವೀಣಾಮಹಾಂತೇಶ್, ಕ್ಷೇತ್ರದಲ್ಲಿ ಎರಡು ವಾರಗಳಿಂದ ಕೆಪಿಸಿಸಿ ಒಬಿಸಿ ಘಟಕದ ರಾಜ್ಯಾಧ್ಯಕ್ಷರಾದ ಲಕ್ಷ್ಮೀನಾರಾಯಣ ಅವರೊಂದಿಗೆ ಪ್ರಚಾರ ಪ್ರವಾಸದಲ್ಲಿದ್ದು, ಜನರಿಂದ, ಗ್ರಾ.ಪಂ ಸದಸ್ಯರುಗಳಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಸದಾ ಗ್ರಾಮ ಪಂಚಾಯತ್ ಗಳ ಶ್ರೆಯೋಭಿವೃದ್ಧಿಗಾಗಿ ಶ್ರಮಿಸುವ ಕೊಂಡಯ್ಯ ನವರು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎನ್ನುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು..

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend