ರಾಷ್ಟ್ರಕವಿ ಕುವೆಂಪು ರವರ ಸೊಸೆ ರಾಜೇಶ್ವರಿ ವಿಧಿವಶ
ರಾಷ್ಟ್ರಕವಿ ಕುವೆಂಪು ರವರ ಮಗ ಸಾಹಿತಿ ದಿವಂಗತ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಯವರ ಪತ್ನಿ ಶ್ರೀಮತಿ ರಾಜೇಶ್ವರಿ ತೇಜಸ್ವಿಯವರು (೮೪ ವರ್ಷ) ಇವರು ಬೆಂಗಳೂರಿನ ರಾಜಲಕ್ಷ್ಮಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ.ಇವರು ತಿವ್ರ ಜ್ವರದಿಂದ ಬಳಲುತ್ತಿದ್ದರು. ಇವರು ಅನೇಕ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿದ್ದರು. ಆನೇಕ ಕೃತಿಗಳನ್ನು ಕೂಡ ರಚಿಸಿದ್ದಾರೆ.ಒಮ್ಮೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದರು ಇವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಇವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲೆಂದು ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಡಾ.ನಾಯಕರಹಳ್ಳಿ ಮಂಜೇಗೌಡ ಸಂತಾಪ ಸೂಚಿಸಿದ್ದಾರೆ..

ವರದಿ.ಗಿರೀಜಾ, ಬೆಳ್ಳಕಟ್ಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
