ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ…!!!

ನಗರದ ರಾಷ್ಟ್ರೀಯ ಹೆದ್ದಾರಿ 13 ರ ರೈಲ್ವೆ ಸೇತುವೆ ಬಳಿ ಬುಧವಾರ ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ.
ನಗರದ ಚಳ್ಳಕೆರೆ ರಸ್ತೆಯ ವೆಂಕಟೇಶ್ವರ ಬಡಾವಣೆಯ ನಿವಾಸಿಗಳಾದ ನೇತ್ರ (26) ಮತ್ತು ಸುಶೀಲಮ್ಮ (40) ಮೃತಪಟ್ಟ ಮಹಿಳೆಯರು. ಎಂದಿನಂತೆ ಚಿಂದಿ ಹಾಯಲು ಬಂದಾಗ ನಗರದ ರಾಷ್ಟ್ರೀಯ ಹೆದ್ದಾರಿ 13 ಕನಕನಗರ ಬಳಿಯಲ್ಲಿ ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಮೃತರ ಸಂಬಂಧಿಕರು ಆಗಮಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಬಡಾವಣೆ ಠಾಣೆ ಪೊಲೀಸರು ಮತ್ತು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend