ಹೋರಾಟಕ್ಕೆ ಸಿಕ್ಕ ಜಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿರುವ ಗ್ರಂಥಾಲಯ ಪುನಾರಂಭ…!!!

ಹೋರಾಟಕ್ಕೆ ಸಿಕ್ಕ ಜಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿರುವ ಗ್ರಂಥಾಲಯ ಪುನಾರಂಭ: ವಿದ್ಯಾರ್ಥಿಗಳಿಗೆ ಸಂತಸ, ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಕಳೆದ ಒಂದು ವರ್ಷದಿಂದ ಸಿಬ್ಬಂದಿಗಳು ಇಲ್ಲದಿರುವುದರಿಂದ ಹಲವಾರು ವಿದ್ಯಾರ್ಥಿಗಳು ಹಾಗೂ ಓದುಗರು ತೊಂದರೆ ಅನುಭವಿಸಿದ್ದರು.

ವಿದ್ಯಾರ್ಥಿಗಳ ದೂರಿನ ಮೇಲೆ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯ ಸಂಚಾಲಕರು ವಿಜಯ್ ಕವಲೂರ ಅವರು ಕೇಂದ್ರೀಯ ಬಸ್ ನಿಲ್ದಾಣದ ವ್ಯವಸ್ಥಾಪಕರಿಗೆ ಕಳೆದ ತಿಂಗಳು ಮನವಿ ಕೊಡುವುದರ ಮುಖಾಂತರ ಎಚ್ಚರಿಕೆ ನೀಡಿದರು.

ಮನವಿಗೆ ಸ್ಪಂದಿಸಿದ ಕೇಂದ್ರೀಯ ಬಸ್ ನಿಲ್ದಾಣದ ವಿಭಾಗೀಯ ನಿಯಂತ್ರಣಾಧಿಕಾರಿ ಎಮ್.ಎ.ಮುಲ್ಲಾ ಹಾಗೂ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಎಂದಿನಂತೆ ಗ್ರಂಥಾಲಯ ಪುನಾರಂಭವಾಗಿದೆ. ಗ್ರಂಥಾಲಯ ರೀ ಓಪನ್ ನಿಂದ ಪುಸ್ತಕ ಪ್ರೇಮಿಗಳು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು…

ವರದಿ. ಸಂಗೀತ, ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend