;

ಸಿಂಧನೂರು :ತುರ್ವಿಹಾಳ ಪ. ಪಂ. ಕಾಂಗ್ರೆಸ್ ಪಕ್ಷದ ಗೆಲುವು. ಅಭ್ಯರ್ಥಿಗಳ ಸಂಭ್ರಮಚಾರಣೆ.

ಸಿಂಧನೂರು :ತುರ್ವಿಹಾಳ ಪ. ಪಂ. ಕಾಂಗ್ರೆಸ್ ಪಕ್ಷದ ಗೆಲುವು. ಅಭ್ಯರ್ಥಿಗಳ ಸಂಭ್ರಮಚಾರಣೆ.

ತೀವ್ರ ಕುತೂಹಲ ಮೂಡಿಸಿದ ಸಿಂಧನೂರು ತಾಲೂಕಿನ ತುರ್ವಿಹಾಳ ಪ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. 14 ವಾರ್ಡಗಳ ಪೈಕಿ ಕಾಂಗ್ರೆಸ್ 9, ಬಿಜೆಪಿ 2ಸ್ಥಾನ,ಪಕ್ಷೇತರ 3 ಜಯಗಳಿಸಿದೆ.‌ ಈ ಮೂಲಕ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿಯಲಿದೆ.ತುರ್ವಿಹಾಳ ಪಟ್ಟಣವು ಚುನಾವಣೆಯ ಜಿದ್ದಾಜಿದ್ದಿನ ಕಣವಾಗಿತ್ತು. ಬಿಜೆಪಿಯ ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ,ಮತ್ತು ಕಾಂಗ್ರೆಸ್ ಹಾಲಿ ಶಾಸಕರಾದ ಬಸನಗೌಡ ತುರ್ವಿಹಾಳ ನಡುವೆ ತೀವ್ರ ಪೈಪೋಟಿಯಲ್ಲಿ ಕಾಂಗ್ರೆಸ್ ನ ಮೇಲುಗೈ ಸಾಧಿಸಿದೆ. ಹೀಗಾಗಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

ಸಿಂಧನೂರು ನಗರದ ಮಿನಿವಿಧಾನಸೌಧ ಬಳಿ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು‌‌.

ಮಾನ್ಯ ತಹಶೀಲ್ದಾರರಿಂದ ಸದಸ್ಯತ್ವ ಪ್ರಮಾಣಪತ್ರ ಪಡೆದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಾಪುಗೌಡ ತುರ್ವಿಹಾಳ ಮಾತನಾಡಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ ಮತದಾರರಿಗೆ ಮತ್ತು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರಿಗೆ, ಮುಖಂಡರಿಗೆ ಧನ್ಯವಾದಗಳನ್ನು ತಿಳಿಸಿದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;