;

ಮೊಳಕಾಲ್ಮೂರು: ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಆಗ್ರಹಿಸಿ ಬೃಹತ್ ಪಾದಯಾತ್ರೆ…!!!

ಮೊಳಕಾಲ್ಮೂರು: ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಆಗ್ರಹಿಸಿ ಬೃಹತ್ ಪಾದಯಾತ್ರೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಆಗ್ರಹಿಸಿ ಕೊಂಡ್ಲಹಳ್ಳಿಯಿಂದ ಮೊಳಕಾಲ್ಮೂರು ಪಟ್ಟಣದವರಿಗೆ ಮಾದಿಗ ದಂಡೋರ ಸಮಿತಿಯಿಂದ ಬೃಹತ್ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಪರಿಶಿಷ್ಟ ಜಾತಿಯಲ್ಲಿ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗೀಕರಣವಾಗಿ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಮಾದಿಗ ಸಮುದಾಯಕ್ಕೆ ಮಾದಿಗ ಎಂದೇ ಜಾತಿ ಪ್ರಮಾಣಪತ್ರ ನೀಡಬೇಕು. ಪರಿಶಿಷ್ಟ ಜಾತಿ ಪತ್ರದಲ್ಲಿ ಈಗಾಗಲೇ ಹಲವರು ಸುಳ್ಳು ದಾಖಲೆ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ ಇವರಿಗೆ ಕ್ರಿಮಿನಲ್ ಕೇಸು ದಾಖಲಿಸಬೇಕು.

ಸದಾಶಿವ ಆಯೋಗ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಈಗಾಗಲೇ ಹಲವು ಸರ್ಕಾರಗಳು ಬರೀ ಭರವಸೆಗಳನ್ನೇ ಹೇಳುತ್ತಿದ್ದಾರೆ ಇದರಿಂದಾಗಿ ನೈಜ ಪರಿಶಿಷ್ಟ ಸಮುದಾಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ ಸರ್ಕಾರವು ಕೂಡಲೇ ನ್ಯಾಯಮೂರ್ತಿ ಆಯೋಗ ವರದಿಯನ್ನು ಜಾರಿಗೊಳಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಸಿದರು. ಪಾದಯಾತ್ರೆಯಲ್ಲಿ ಮಾದಿಗ ದಂಡೋರ ಅಧ್ಯಕ್ಷರಾದ ಹನುಮಂತಪ್ಪ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾದ ಕಾಡಪ್ಪ ಮುಖಂಡರಾದ ತಿಪ್ಪೇಸ್ವಾಮಿ ನಾಗರಾಜ ರಾಮಾಂಜನೇಯ ತಿಪ್ಪೇಶ ಸೇರಿದಂತೆ ನೂರಾರು ಮಾದಿಗ ಸಮುದಾಯದ ಹೋರಾಟಗಾರರು ಪಾಲ್ಗೊಂಡಿದ್ದರು ಪಾಲ್ಗೊಂಡಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;