;

ಹುಮನಾಬಾದ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಭೇಟಿ…!!!

ಬೀದರ :ಹುಮನಾಬಾದ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಭೇಟಿ…..

ಹುಮನಾಬಾದ್: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ 5 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಕಳೆದ ಎರಡು ದಿನಗಳ ಹಿಂದೆ ಒಬ್ಬ ವಿದ್ಯಾರ್ಥಿನಿಗೆ ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡಿತ್ತು. ಕೋವಿಡ್ ‍ಪರೀಕ್ಷೆಯಲ್ಲಿ ಆ ವಿದ್ಯಾರ್ಥಿನಿಗೆ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿನಿಯ ಸಂಪರ್ಕಕ್ಕೆ ಬಂದವರನ್ನು ತಪಾಸಣೆ ನಡೆಸಲಾಗಿದ್ದು, 5 ವಿದ್ಯಾರ್ಥಿಗಳಿಗೆ ಸೋಂಕು ಕಂಡುಬಂದಿದೆ.

ಸೋಂಕಿತ ವಿದ್ಯಾರ್ಥಿಗಳಿಗೆ ವಸತಿ ಶಾಲೆಯ ಒಂದು ಪ್ರತ್ಯೇಕ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಖ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ, ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ..

ಡಾ.ಚಂದ್ರಶೇಖರ್ ಪಾಟೀಲ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ ಸುದ್ದಿ ತಿಳಿದು ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ‘ಮಕ್ಕಳಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ, ಅವರ ಆರೋಗ್ಯದ ಮೇಲೆ ನಿಗಾ ವಹಿಸಬೇಕು ಅಂತ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರದೀಪ್ ಕುಮಾರ್ ಹಿರೇಮಠ, ಹಲವು ಅಧಿಕಾರಿಗಳು ಭಾಗಿ…

 

ವರದಿ. ಸುನಿಲ್ ಮೆಟ್ರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;