;

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ವೀರೇಶ್ ಕಿಟ್ಟಪ್ಪ ನವರ್ ಆಯ್ಕೆ…!!!

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ವೀರೇಶ್ ಕಿಟ್ಟಪ್ಪ ನವರ್ ಆಯ್ಕೆ. ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ವಿಜಯನಗರ ಜಿಲ್ಲೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲೆ ಬಿಜೆಪಿಯ ಹಿಂದುಳಿದ ವರ್ಗಗಳ ಜಿಲ್ಲಾ ಮೋರ್ಚ ಅಧ್ಯಕ್ಷರಾದ ಈ ಟಿ ಲಿಂಗರಾಜು ಹಾಗೂ ಪಕ್ಷದ ಮುಖಂಡರು ಸೇರಿ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ ಗ್ರಾಮದ ವೀರೇಶ್ ಕಿಟ್ಟಪ್ಪನವರ್ ನವರನ್ನು ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿ ಆದೇಶ ಮಾಡಿದ್ದಾರೆ. ಇದಕ್ಕೆ ವೀರೇಶ್ ಕಿಟ್ಟಪ್ಪನವರಿಗೆ ಅನೇಕರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನನ್ನನ್ನು ಆಯ್ಕೆ ಮಾಡಿದ ಪಕ್ಷದ ಎಲ್ಲಾ ಮುಖಂಡರಿಗೆ ಧನ್ಯವಾದಗಳನ್ನು ತಿಳಿಸುತ್ತಾ ನೀಡಿದ ಜವಾಬ್ದಾರಿಯನ್ನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆಂದು ವೀರೇಶರವರು ಪತ್ರಿಕೆ ಜೊತೆ ಮಾತನಾಡಿದರು.

ವರದಿ ಡಿ. ಎಂ.ಈಶ್ವರಪ್ಪ. ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;