;

ವೀಕೆಂಡ್ ಕರ್ಪ್ಯೂ ರದ್ದು: ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ..!!!

ವೀಕೆಂಡ್ ಕರ್ಪ್ಯೂ ರದ್ದು: ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ…

ಬೆಂಗಳೂರು: ಕೊವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದು, ಉಳಿದೆಲ್ಲ ನಿರ್ಬಂಧಗಳು ಹಾಗೆಯೇ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಶನಿವಾರ ಹಾಗೂ ಭಾನುವಾರದ ಕರ್ಫ್ಯೂ ರದ್ದುಗೊಳಿಸಲಾಗಿದ್ದು, ತಜ್ಞರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ವೇಳೆ ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಳವಾದರೆ, ಮತ್ತೆ ವೀಕೆಂಡ್ ಕರ್ಫ್ಯೂ ಹಾಕಬೇಕಾಗುತ್ತದೆ ಎಂದು ಅವರು ಹೇಳಿದರು.

ಪ್ರತಿಭಟನೆ, ರ್‍ಯಾಲಿ, ಜಾತ್ರೆ ಮೊದಲಾದವುಗಳಿಗೆ ಹಾಕಿರುವ ನಿರ್ಬಂಧಗಳು ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದರು.

ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವೀಕೆಂಡ್ ಕರ್ಫ್ಯೂಗೆ ಸಲಹೆ ನೀಡಿದ ತಜ್ಞರ ಹೆಸರು ಹೇಳಿ ಎಂದು ಮಾಧ್ಯಮಗಳ ಡಿಬೇಟ್ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದರು…

ವರದಿ.ಪ್ರತಾಪ್. ಸಿ. ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;