;

ಹಾಲಿಗೆ ರಾಸಾಯನಿಕ ಮಿಶ್ರಣ ; ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಕನ್ನಡ ಸೇನೆ ಮಂಜುನಾಥ್ ಒತ್ತಾಯ…!!!

ಹಾಲಿಗೆ ರಾಸಾಯನಿಕ ಮಿಶ್ರಣ ; ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಕನ್ನಡ ಸೇನೆ ಮಂಜುನಾಥ್ ಒತ್ತಾಯ.

ಮಂಡ್ಯ :- ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಹಾಲಿಗೆ ನೀರು ಪ್ರಕರಣ ಮತ್ತು ಹಾಲಿಗೆ ರಾಸಾಯನಿಕ ಕಲಬೆರಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಹಾಲಿಗೆ ನೀರು ಮಿಶ್ರಣ ಮಾಡಿ ಕೋಟ್ಯಂತರ ರೂಪಾಯಿ ಹಗರಣ ಸಂಬಂಧ ಈಗಾಗಲೇ ಸಿಓಡಿ ತನಿಖೆ ನಡೆಸುತ್ತಿರುವಾಗಲೇ, ಕೆ.ಹೊನ್ನಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಚೌಡೇಶ್ವರಿ ಹಾಲು ಶೇಖರಣಾ ಮಾರ್ಗದ ಮೂಲಕ ಸರಬರಾಜಾಗುವ ಹಾಲಿನಲ್ಲಿ ರಾಸಾಯನಿಕ ಕಲಬೆರಕೆ ಆಗಿರುವುದು ಆತಂಕಕ್ಕೆ ಕಾರಣವಾಗಿದೆ ಎಂದರು.

ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಎಷ್ಟು ದಿನಗಳಿಂದ ನಡೆಯುತ್ತಿದೆ. ಈ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ. ಜಿಲ್ಲೆಯ ಬೇರೆ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲೂ ಇಂತಹ ಅಕ್ರಮ ನಡೆಯುತ್ತಿದೆಯೇ ಎಂಬ ಬಗ್ಗೆ ಅನುಮಾನಗಳು ಕೂಡ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಅತೀ ಜರೂರಾಗಿ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹ ಪಡಿಸಿದರು.


ವರದಿ :ಗಿರೀಶ್. ಎಂ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;