;

ಮಾಜಿ ಮುಖ್ಯಮಂತ್ರಿ ಬಿ, ಎಸ್, ಯಡಿಯೂರಪ್ಪನವರ ಮೊಮ್ಮಗಳು ಆತ್ಮಹತ್ಯೆ…!!!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಮೂವತ್ತು ವರ್ಷದ ಸೌಂದರ್ಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮೃತದೇಹವನ್ನು ಬೌರಿಂಗ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ಎಂಬಿಬಿಎಸ್‌ ಓದಿದ್ದ ಸೌಂದರ್ಯ ಅವರು ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ ಒಂದು ಮಗು ಕೂಡಾ ಇತ್ತು ಎಂದು ತಿಳಿದು ಬಂದಿದೆ.

ಈ ಒಂದು ಪ್ರಕರಣ ಹೈಗ್ರೌಂಡ್ಸ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸೌಂದರ್ಯ ಅವರು ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿಯವರ ಮಗಳು ಎಂದು ತಿಳಿದುಬಂದಿದೆ.

ಬೆಂಗಳೂರಿನ ಶ್ಯಾಂಘ್ರಿಲಾ ಹೊಟೇಲ್ ಬಳಿಯಲ್ಲಿರುವ ಪ್ಲ್ಯಾಟನಲ್ಲಿನ ಮನೆಯಲ್ಲಿನ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಗೊತ್ತಾಗಿದೆ…

ವರದಿ. ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;