ವೆಸ್ಟ್ ಇಂಡಿಸ್ ವಿರುದ್ಧ ಟೀಮ್ ಇಂಡಿಯಾಗೆ 2-0ಪಂದ್ಯ ಜಯ…!!!

ಅಹಮದಾಬಾದ್: ಕನ್ನಡಿಗ ಪ್ರಸಿದ್ಧ ಕೃಷ್ಣ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 44 ರನ್ ಅಂತರದಿಂದ ಸೋಲಿಸುವ ಮೂಲಕ ಏಕದಿನ ಸರಣಿಯನ್ನು 2-0 ಅಂತರದಿಂದ ಜಯಿಸಿದೆ.

238 ರನ್ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು.

ವೆಸ್ಟ್ ಇಂಡೀಸ್ ತಂಡ ನಿರಂತರವಾಗಿ ವಿಕೆಟ್ ಕಳೆದುಕೊಂಡಿತು. ವೆಸ್ಟ್ ಇಂಡೀಸ್ ಪರ ಶಮರ್ ಬ್ರೂಕ್ಸ್ 44, ಅಕೇಲ್ ಹೋಸೇನ್ 34, ಶೈ ಹೋಪ್ 27, ಓಡೆನ್ ಸ್ಮಿತ್ 24 ರನ್ ಗಳಿಸಿದರು. ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡ 46 ಓವರ್ ಗಳಲ್ಲಿ 193 ರನ್ ಗಳಿಗೆ ಆಲೌಟಾಯಿತು.

ಭಾರತದ ಪರ ಪರಿಣಾಮಕಾರಿ ಬೌಲಿಂಗ್ ಮಾಡಿದ ಪ್ರಸಿದ್ಧ ಕೃಷ್ಣ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದರು. ಉಳಿದಂತೆ ಶಾರ್ದೂಲ್ ಠಾಕೂರ್ 2, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ದೀಪರ್ ಹೂಡಾ ತಲಾ 1 ವಿಕೆಟ್ ಪಡೆದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಟೀಂ ಇಂಡಿಯಾ 43 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು. ಕಳೆದ ಪಂದ್ಯದಲ್ಲಿ ಅರ್ಧ ಶತಕ ಗಳಿಸಿ ಮಿಂಚಿದ್ದ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಬೇಗ ಔಟಾದರು. ಬಳಿಕ ಆರಂಭಿಕರಾಗಿ ಬಡ್ತಿ ಪಡೆದಿದ್ದ ರಿಷಭ್ ಪಂತ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಸಹ ಬೇಗ ಔಟಾದರು. ರೋಹಿತ್ 5 ರನ್ ಗಳಿಸಿದರೆ, ರಿಷಭ್ ಪಂತ್ 18 ಮತ್ತು ಕೊಹ್ಲಿ 18 ರನ್ ಗಳಿಸಿದರು.

ಕೊಹ್ಲಿ ಔಟಾದ ಬಳಿಕ ಜೊತೆಯಾದ ಕೆ.ಎಲ್. ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ತಂಡಕ್ಕೆ ಚೇತರಿಕೆ ನೀಡಿದರು. ರಾಹುಲ್ ಅರ್ಧಶತಕದ ಹೊಸ್ತಿಲಲ್ಲಿ ರನೌಟ್ ಆದರು. ರಾಹುಲ್ 49 ರನ್ ಗಳಿಸಿ ಔಟಾದರು. ಇನ್ನು ಸೂರ್ಯ ಕುಮಾರ್ ಯಾದವ್ 64 ರನ್ ಗಳಿಸಿ ಔಟಾದರು. ವಾಷಿಂಗ್ಟನ್ ಸುಂದರ್ 24 ಮತ್ತು ದೀಪಕ್ ಹೂಡ 29 ರನ್ ಗಳಿಸಿದರು. ಅಂತಿಮವಾಗಿ ಟೀಂ ಇಂಡಿಯಾ 50 ಓವರ್ ಗಳಲ್ಲಿ 96 ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿತು…

ವರದಿ. ನ್ಯೂಸ್ ಬ್ಯುರೋ ಎಚ್ಚರಿಕೆ ಕನ್ನಡ ನ್ಯೂಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend