ಕಾರ್ಯನಿರ್ವಹಣಾಧಿಕಾರಿ ಮಡಗಿನ ಬಸಪ್ಪ ಅವರ ಮೇಲೆ ಬಿಜೆಪಿ ಮುಖಂಡರು ಹಲ್ಲೆ…!!!

ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಡಗಿನ ಬಸಪ್ಪ ಅವರ ಮೇಲೆ ಬಿಜೆಪಿ ಮುಖಂಡರು ಹಲ್ಲೆ ನಡೆಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಬಿಜೆಪಿ ಚಳ್ಳಕೆರೆ ಮಂಡಲದ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಹಾಗೂ ನಾಲ್ವರು ಸೋಮವಾರ ಕಚೇರಿಗೆ ನುಗ್ಗಿ ಹಲ್ಲೆ ನಡೆಸಿದ್ದರು.ತಾಲ್ಲೂಕು ಪಂಚಾಯತಿ ಕೆಡಿಪಿ ಸಭೆಗೆ ನೂತನ ಸದಸ್ಯರನ್ನು ಆಹ್ವಾನಿಸಿರಲಿಲ್ಲ ಎಂಬ ಆರೋಪ ಮಾಡಿದ್ದರು.
ಹಲ್ಲೆ ನಡೆಸಿದ ಬಿಜೆಪಿಯ ನಾಲ್ವರು ಮುಖಂಡರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಹಲ್ಲೆ ಖಂಡಿಸಿ ಸರ್ಕಾರಿ ನೌಕರರು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ…

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend