ಸರ್ಕಾರಿ ನೌಕರರ ಮೇಲಿನ ಹಲ್ಲೆಯನ್ನು ಖಂಡಿಸಿ ಇಂದು ಚಳ್ಳಕೆರೆಯಲ್ಲಿ ಚಳ್ಳಕೆರೆ ಹಾಗೂ ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಚಳ್ಳಕೆರೆಯ ಇಒ ಮೇಲೆ ಬಿಜೆಪಿ ಮುಖಂಡರು ಹಲ್ಲೆ ಮಾಡಿರುವುದನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕ್ರಮಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಕಾಂಗ್ರೆಸ್ ಮುಖಂಡರು ಮಾತನಾಡಿ, ಬಿಜೆಪಿ ಮುಖಂಡರ ಗೂಂಡಾ ವರ್ತನೆ ನಿಜಕ್ಕೂ ಖಂಡನೀಯ. ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರು, ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು…
ವರದಿ. ಚಕ್ರಿ ಬಸವರಾಜ್. ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
