ಕೂಡ್ಲಿಗಿ:ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಂದ ಮನವಿ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ,ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆಯಂತೆ ಕಾರ್ಯನಿರ್ವಹಿಸುತ್ತಿರುವ ನೌಕರರು.ತಮ್ಮ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಸರ್ಕಾರಕ್ಕೆ ಮನವಿ ಪತ್ರ ನೀಡಿದ್ದಾರೆ. ಭಾರತೀಯ ಮಜ್ದೂರ್ ಸಂಘ ಸಂಯೋಜಿತಗೊಂಡಿರುವ,ಕ.ರಾ.ಆ ಮತ್ತು ಕು.ಕ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಕೂಡ್ಲಿಗಿ ಪದಾಧಿಕಾರಿಗಳು.ತಾಲೂಕು ವೈದ್ಯಾಧಿಕಾರಿ ಷಣ್ಮುಖನಾಯ್ಕ ರಿಗೆ ಹಾಗೂ ಆಸ್ಪತ್ರೆಯ ಆಡಳಿತಾಧಿಕಾರಿಗೆ,ತಮ್ಮ ವಿವಿದ ಬೇಡಿಕೆಗಳ ಮನವಿ ಪತ್ರವನ್ನು ನೀಡಿದರು.ಅವರು ಈ ಮೂಲಕ ತಮ್ಮ ಹಕ್ಕೋತ್ತಾಯವನ್ನು ಈಡೇರಿಸುವಂತೆ,ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ಗುತ್ತಿಗೆ ನೌಕರ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳಾದ,ಜಿಗೇನಹಳ್ಳಿ ಪ್ರಶಾಂತ,ವೇದಾವತಿ,ಪಿ.ಸತೀಶ,ಗಂಗಮ್ಮ,ನಾಗರತ್ನಮ್ಮ,ವಿನಾಯಕ,ಅರುಣ,ಬೋರಮ್ಮ,ಬೋರಮಣ್ಣ,ಗಂಗಮ್ಮ ಮುಂತಾದವರಿದ್ದರು…

ವರದಿ. ಡಿ.ಎಂ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
