ವಿಜಯನಗರ ಜಿಲ್ಲೆ.ಕೂಡ್ಲಿಗಿ ತಾಲ್ಲೂಕು.ಕಾನಹೊಸಹಳ್ಳಿ.
ಕಾನಹೊಸಹಳ್ಳಿ ಗ್ರಾಮದ ಮಾರಿಕಾಂಬಾ ಜಾತ್ರೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ.
ಪಟ್ಟಣದ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ದಿನಾಂಕ ದಿನಾಂಕ 15.3.2022 ರಿಂದ17,,3.2022 ರವರೆಗೆ
ಜರುಗಲಿದ್ದು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಗ್ರಾಮದಲ್ಲಿ ವಿದ್ಯುತ್ ವ್ಯವಸ್ಥೆ, ಹಾಗೂ ಚರಂಡಿಯ ಸ್ವಚ್ಛತೆ ಕಾರ್ಯ ನಡೆಯುತ್ತಿದ್ದು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನಿಂಗಪ್ಪನವರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು. ಮತ್ತು ಸಿಬ್ಬಂದಿಯೊಂದಿಗೆ. ಸ್ವಚ್ಛತೆ ಮಾಡಬೇಕಾದ ಚರಂಡಿ ಹಾಗೂ ನೀರಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ಮಾಡಿದರು. ನಂತರ ಗ್ರಾಮದಲ್ಲಿ ಸ್ವಚ್ಛತೆ ನಡೆಯುತ್ತಿದ್ದ ಸ್ಥಳವನ್ನು ವೀಕ್ಷಣೆ ಮಾಡಿದರು. ನಂತರ ಗ್ರಾಮ ಪಂಚಾಯತಿ ಸಿಬ್ಬಂದಿಯೊಂದಿಗೆ ಮಾತನಾಡಿ. ಜಾತ್ರೆಯ ಸಮಯದಲ್ಲಿ ಯಾವುದೇ ರೀತಿಯಿಂದ. ಸಾರ್ವಜನಿಕರಿಗೆ ತೊಂದರೆಯಾಗಬಾರದು. ಬೇಸಿಗೆ ಆರಂಭವಾದ ರಿಂದ ಕುಡಿಯುವ ನೀರಿನ ವ್ಯವಸ್ಥೆಗೆ ಪ್ರಥಮ ಆದ್ಯತೆ ನೀಡಬೇಕು, ಚರಂಡಿಯನ್ನು ಆದಷ್ಟು ಬೇಗ ಸ್ವಚ್ಛತೆ ಮಾಡಿಸಿ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಔಷಧಿಗಳನ್ನು ಸಿಂಪಡಿಸಬೇಕು, ಗ್ರಾಮದ ವಾರ್ಡ್ಗಳಲ್ಲಿ ಪ್ರತಿಯೊಬ್ಬ ಸದಸ್ಯರು. ವಿದ್ಯುತ್ ಹಾಗೂ ನೀರಿನ ವ್ಯವಸ್ಥೆಯನ್ನು ಮಾಡಿಸಿರಿ ಎಂದು. ಈ ಸಂದರ್ಭದಲ್ಲಿ ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ ಡಿ ಎಂ ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
